ಉಡುಪಿ: ಉಡುಪಿ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಸಣ್ಣ ನೀರಾವರಿ ಇಲಾಖೆಯ ಪಶ್ಚಿಮ ವಾಹಿನಿ ಯೋಜನೆಯಡಿ 2.42 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಕಾಮಗಾರಿಗಳಿಗೆ ಇಂದು ಶಾಸಕ ಕೆ. ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು.
ಕೆಮ್ಮಣ್ಣು ಗ್ರಾಮ ಪಂಚಾಯತ್ ಕಂಬಳ ತೋಟದ ಬಳಿ ಕಿಂಡಿ ಅಣೆಕಟ್ಟು 86.00 ಲಕ್ಷ ರೂ. ದಲ್ಲಿ ನಿರ್ಮಾಣಗೊಳ್ಳಲಿದೆ. ತೆಂಕನಿಡಿಯೂರು ಗ್ರಾಮದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ರೂ. 78.00 ಲಕ್ಷ, ರೂ. ಬಡಾನಿಡಿಯೂರು ಗ್ರಾಮದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ ರೂ. 78.00 ಲಕ್ಷ ರೂ. ಸೇರಿದಂತೆ ಒಟ್ಟು 2 ಕೋಟಿ 42 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
Kshetra Samachara
04/03/2022 09:30 pm