ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರೆ : ಕಸ ವೀಲೇವಾರಿ ವಿವಾದ: ಮಾಜಿ ಸಚಿವ ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ!

ಪಡುಬಿದ್ರೆ: ಕಸ ವಿಲೇವಾರಿ ಸಂಬಂಧ ಮಾಜಿ ಸಚಿವರು ಮತ್ತು ಸ್ಥಳೀಯ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರು ಗ್ರಾಮದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣವಾಗಿದೆ. ಕಾಪು ಪುರಸಭೆ ,ಎಲ್ಲೂರು, ಪಡುಬಿದ್ರಿ , ಉಚ್ಚಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಸವಿಲೇವಾರಿಗೆ ಇಲ್ಲಿ ವ್ಯವಸ್ಥೆ ಮಾಡಲಾಗಿತ್ತು ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ಅಭಿಪ್ರಾಯ.

ಆದರೆ ಸ್ಥಳೀಯ ಗ್ರಾಮಸ್ಥರು ಪಡುಬಿದ್ರೆ ಮತ್ತು ಉಚ್ಚಿಲ ಗ್ರಾಮದ ಕಸವನ್ನು ಇಲ್ಲಿ ತರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.ನ್ಯಾಯಾಲಯದಿಂದ ತಡೆಯಾಜ್ಞೆ ಯನ್ನು ಕೂಡ ತಂದಿದ್ದರು.

ಹಾಲಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರ ನೇತೃತ್ವದಲ್ಲಿ ಸಭೆ ನಡೆದು ಕೇವಲ ಕಾಪು ಪುರಸಭೆ ಹಾಗೂ ಎಲ್ಲೂರು ಗ್ರಾಮದ ಕಸವನ್ನು ಈ ಘಟಕದಲ್ಲಿ ವಿಲೇವಾರಿ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆ ಬಳಿಕ ತಡೆಯಾಜ್ಞೆಯನ್ನು ತೆರವು ಮಾಡಲಾಗಿತ್ತು. ಇದೀಗ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಪಡುಬಿದ್ರೆ ಮತ್ತು ಉಚ್ಚಿಲ ಗ್ರಾಮದ ಕಸವನ್ನು ಕೂಡ ಇಲ್ಲೇ ವಿಲೇವಾರಿ ಮಾಡುವಂತೆ ಆಗ್ರಹಿಸಿದೆ. ಈ ವೇಳೆ ಮಾಜಿ ಸಚಿವರು ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.

Edited By : Manjunath H D
Kshetra Samachara

Kshetra Samachara

24/05/2022 03:30 pm

Cinque Terre

10.89 K

Cinque Terre

2

ಸಂಬಂಧಿತ ಸುದ್ದಿ