ಹೆಬ್ರಿ: ನೂತನ ಹೆಬ್ರಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧವನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಸಚಿವರಾದ ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಮತ್ತಿತರರು ಸಮಾರಂಭದಲ್ಲಿ ಭಾಗಿಯಾದರು. ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ಹಾಗೂ 1.5 ಕೋಟಿ ವೆಚ್ಚದ ಹೆಬ್ರಿ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಿಸಿದರು.
Kshetra Samachara
01/06/2022 05:06 pm