ಕಾಪು :ಶಾಸಕರ ನಡೆ - ಗ್ರಾಮಗಳ ಕಡೆ ಕಾರ್ಯಕ್ರಮದಡಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರು ಇನ್ನಂಜೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿ, ವಿವಿಧ ಸವಲತ್ತು ವಿತರಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಇನ್ನಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ 9 ಕೋಟಿ ರೂಪಾಯಿ ಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಕಾಪು ಕ್ಷೇತ್ರದಲ್ಲಿ 900 ಕೋಟಿ ರೂ. ಗೂ ಮಿಕ್ಕಿದ ಅನುದಾನವನ್ನು ತರಿಸಿಕೊಂಡು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಉಪಾಧ್ಯಕ್ಷ ಸುರೇಶ್ ಶೆಟ್ಟಿ, ಸುದೀರ್ ಕುಮಾರ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶಶಿಕಲಾ,ತಾ.ಪ. ಇಒ ಶಿವಪ್ರಕಾಶ್,ಕಂದಾಯ ನಿರೀಕ್ಷಕ ಸುಧೀರ್ ಶೆಟ್ಟಿ,ಕೃಷಿ ಇಲಾಖೆ ಅಧಿಕಾರಿ ಪಿ. ಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
04/06/2022 04:59 pm