ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ನವ ಕರ್ನಾಟಕದ ನಿರ್ಮಾಣ ಸರಕಾರದ ಕಲ್ಪನೆ-ಸಚಿವ ಸುನಿಲ್ ಕುಮಾರ

ಸುಳ್ಯ: ಸರಕಾರದ ಯೋಜನೆಗಳು ಬೆಂಗಳೂರಿಗೆ ಸೀಮಿತ ಅಲ್ಲ. ಸರಕಾರಿ ಘೋಷಣೆಗಳು ಪುಸ್ತಕದಲ್ಲಿ ಮಾತ್ರವಲ್ಲ. ಅದು ಗ್ರಾಮ ಮಟ್ಟದಲ್ಲಿ ಅನುಷ್ಠಾನ ಆಗಬೇಕು. ಆ ಮೂಲಕ ನವ ಕರ್ನಾಟಕ ರಚನೆ ನಿರ್ಮಾಣ ಮಾಡುವುದು ಸರಕಾರದ ಕಲ್ಪನೆ ಎಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಇಂಧನ ಸಚಿವ ಹಾಗು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ಕುಮಾರ್ ಹೇಳಿದ್ದಾರೆ.

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ‌ ನಡೆದ ಸರಕಾರಿ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದ ಸವಲತ್ತುಗಳ ವಿತರಣೆ ನಿರಂತರ ಪ್ರಕ್ರಿಯೆ ಇದು ಜನರ ಮನೆ ಬಾಗಿಲಿಗೆ ತಲುಪಿಸಲು ಹಲವಾರು ಯೋಜನೆಗಳನ್ನು ರೂಪಿಸಿದೆ. ಮನೆ ಬಾಗಿಲಿಗೆ ಕಂದಾಯ ದಾಖಲೆಗಳನ್ನು, ಮನೆ ಬಾಗಿಲಿಗೆ ಪಿಂಚಣಿಯನ್ನು ತಲುಪಿಸುವ ಯೋಜನೆಯನ್ನು ರೂಪಿಸಿದೆ. ಗ್ರಾಮದಲ್ಲಿ ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡಲಾಗುತಿದೆ. ವಿದ್ಯಾನಿಧಿ ಯೋಜನೆಯಡಿ ರೈತ ಮಕ್ಕಳಿಗೆ ಶಿಕ್ಷಣಕ್ಕೆ ನೆರವನ್ನು ನೀಡಲಾಗುತ್ತದೆ. ಜಿಲ್ಲೆಯ 22 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆಯಡಿ ಸಹಾಯ ಧನ ನೀಡಲಾಗಿದೆ.

ಡೀಮ್ಡ್ ಫಾರೆಸ್ಟ್ ಸಮಸ್ಯೆ ಪರಿಹಾರ: ಸರಕಾರ ಸ್ಪಂದನಾಶೀಲವಾಗಿ‌ ಕಾರ್ಯ ನಿರ್ವಹಿಸುತಿದೆ ಎಂದ ಸಚಿವ ಸುನಿಲ್‌ಕುಮಾರ್

ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಪರಿಹರಿಸಲು ಸರಕಾರ ನಿರ್ಧರಿಸಿದೆ. ಸುಳ್ಯ ತಾಲೂಕಿನಲ್ಲಿ 23 ಸಾವಿರ ಹೆಕ್ಟೇರ್‌ಗಲ್ಲಿ 16 ಸಾವಿರ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಭೂಮಿಯನ್ನು ಕೈಬಿಟ್ಟು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಿ ಅದನ್ನು ಕೃಷಿಕರಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಮಾತನಾಡಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ಮುಟ್ಟುವ ನೆಲೆಯಲ್ಲಿ ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿ‌ಕೊಂಡಿದೆ. ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದ ಮೂಲಕ ಸರಕಾರವೇ ಗ್ರಾಮಗಳಿಗೆ ತೆರಳಿ ಜನರ‌ ಸಮಸ್ಯೆಗಳನ್ನು ಪರಿಹರಿಸುತಿದೆ ಎಂದರು. ಸುಳ್ಯ ತಾಲೂಕಿನಲ್ಲಿ ಅಡಿಕೆಗೆ ಹಳದಿ ರೋಗ ಪೀಡಿತ ಕೃಷಿಕರಿಗೆ ಬದಲಿ ಕೃಷಿಗೆ ಪ್ರೋತ್ಸಾಹ ನೀಡಬೇಕು ಎಂಬ ಬೇಡಿಕೆಯನ್ನು ಸರಕಾರದ‌ ಮುಂದೆ ಇರಿಸಿದೆ. ಇದಕ್ಕೆ ಹಲವರು ಇಲಾಖೆಗಳು ಹಲವು ಯೋಜನೆಗಳನ್ನು ರೂಪಿಸಿದೆ. ಮೀನುಗಾರಿಕಾ ಇಲಾಖೆಯಿಂದ ಮೀನು ಸಾಕಣೆಗೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಹೇಳಿದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರವಹಣಾಧಿಕಾರಿ ಡಾ.ಕುಮಾರ್, ಭೂ ದಾಖಲೆಗಳ ಉಪನಿರ್ದೇಶಕ ನಿರಂಜನ್, ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್, ಡಿವೈಎಸ್‌ಪಿ ಗಾನ ಪಿ.ಕುಮಾರ್, ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

22/06/2022 08:31 pm

Cinque Terre

16.47 K

Cinque Terre

0

ಸಂಬಂಧಿತ ಸುದ್ದಿ