ಬ್ರಹ್ಮಾವರ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೋಡುಗಳು ತುಂಬಿ ಹರಿಯುತ್ತಿದ್ದು, ಹಲವು ಭಾಗಗಳಲ್ಲಿ ಜಲ ಪ್ರವಾಹ ಉಂಟಾಗಿದೆ. ನೂರಾರು ಮನೆಗಳಿಗೆ ನೀರು ನುಗ್ಗಿಹಾನಿಯಾಗಿದ್ದಲ್ಲದೆ ಸಾಕಷ್ಟು ಕೃಷಿಯೂ ಹಾನಿಗೊಳಗಾಗಿದೆ.
ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟು ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದರು. ಸಚಿವರ ಜೊತೆಗೆ ಶಾಸಕ ಕೆ. ರಘುಪತಿ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಶೋಭಾ ಕರಂದ್ಲಾಜೆ ಬ್ರಹ್ಮಾವರ ತಾಲೂಕಿನ ಗಿಳಿಯಾರು ಗ್ರಾಮದ ನೆರೆ ಹಾವಳಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತು ಅಧಿಕಾರಿಗಳು ಸಚಿವರಿಗೆ ಹಾನಿಯ ವಿವರ ನೀಡಿದರು. ಸ್ಥಳೀಯರ ಅಹವಾಲು ಆಲಿಸಿದ ಸಚಿವರು ಅಗತ್ಯ ಪರಿಹಾರದ ಭರವಸೆ ನೀಡಿದರು.
Kshetra Samachara
11/07/2022 04:59 pm