ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪ್ರಾಕೃತಿಕ ವಿಕೋಪಕ್ಕೆ ಒಳಗಾದ ಸ್ಥಳಕ್ಕೆ ಬಿ. ಕೆ. ಹರಿಪ್ರಸಾದ್ ಭೇಟಿ!

ಮಂಗಳೂರು:ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು, ಇತ್ತೀಚೆಗೆ ಸುರಿದ ಭಾರೀ ಮಳೆಗೆ ಪ್ರಾಕೃತಿಕ ತೊಂದರೆಗೆ ಒಳಗಾದ ಮಂಗಳೂರಿನ ಉರ್ವಾ ಸ್ಟೋರ್ ಸುಂಕದಕಟ್ಟೆ ಹಾಗೂ ಕಣ್ಣೂರ್ ವಾರ್ಡಿನ ಬಳ್ಳೂರು ಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ಭಾಗದಲ್ಲಿ ಸುರಿದ ವಿಪರೀತ ಮಳೆಯಿಂದಾಗಿ ಹಲವಾರು ಕಡೆ ಜನರಿಗೆ ಬಹಳಷ್ಟು ತೊಂದರೆಯಾಗಿದೆ. ಮನೆಗಳು ಕುಸಿದು ಜನರು ಸಂಬಂಧಿಕರ ಮನೆಗಳಲ್ಲಿ ವಾಸ ಮಾಡುವಂತಹ ಸ್ಥಿತಿ ಉಂಟಾಗಿದೆ. ಗುಡ್ಡೆಕುಸಿದು ಜನರು ಮನೆಗಳನ್ನು ಬಿಟ್ಟು ಬೇರೆ ಕಡೆ ಆಶ್ರಯಿಸುವಂತಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸರಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸರಿಯಾದ ಕ್ರಮ ಕೈಗೊಳ್ಳಬೇಕು. ಸಂತ್ರಸ್ತರಿಗೆ ಇನ್ನೂ ಕೂಡ ಪರಿಹಾರ ಧನ ಕೈ ಸೇರಿಲ್ಲ.ಶೀಘ್ರದಲ್ಲಿ ತೊಂದರೆಯಾದವರಿಗೆ ಪುನರ್ ವಸತಿ ಸೌಕರ್ಯ ಕಲ್ಪಿಸಬೇಕು ಎಂದರು. ವೈಯಕ್ತಿಕ ನೆಲೆಯಲ್ಲಿ ಹರಿಪ್ರಸಾದ್ ರವರು ಸುಂಕದಕಟ್ಟೆಯ ಮನೆ ಕಳೆದುಕೊಂಡ ಸಂತ್ರಸ್ತ ಪದ್ಮಾವತಿ ಯವರಿಗೆ ತನ್ನ ವೈಯಕ್ತಿಕ ನೆಲೆಯಲ್ಲಿ ಸಹಾಯ ಧನ ನೀಡಿದರು.

ಇದೇ ಸಂದರ್ಭದಲ್ಲಿ ಅವರು ಪಡೀಲ್ ರೈಲ್ವೆ ಅಂಡರ್ ಪಾಸ್ ಬಳಿ ಮತ್ತು ಅಳಪೆ ರಾಷ್ಟ್ರೀಯ ಹೆದ್ದಾರಿ ರೈಲ್ವೆ ಅಂಡರ್ ಪಾಸ್ ಬಳಿ ಭೇಟಿ ನೀಡಿ ಅಲ್ಲಿ ಮಳೆಗಾಲದಲ್ಲಿ ನೀರು ನಿಂತು ಜನರಿಗೆ ತೊಂದರೆಯಾಗುವುದನ್ನು ಪರಿಶೀಲಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ. ಆರ್. ಲೋಬೊ, ಕಾರ್ಪೊರೇಟರ್ ಗಳಾದ ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಆಶ್ರಫ್ ಬಜಾಲ್,ಪಕ್ಷದ ಮುಖಂಡರಾದ ಪ್ರಕಾಶ್ ಸಾಲ್ಯಾನ್, ಅಬ್ದುಲ್ ಸಲಿಂ, ಲುಕ್ಮಾನ್ ಬಂಟ್ವಾಳ, ಮುಂತಾದವರು

ಉಪಸ್ಥಿತರಿದ್ದರು

Edited By :
Kshetra Samachara

Kshetra Samachara

21/07/2022 04:57 pm

Cinque Terre

8.02 K

Cinque Terre

0

ಸಂಬಂಧಿತ ಸುದ್ದಿ