ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಸುರತ್ಕಲ್ ಎನ್ ಐ ಟಿ ಕೆ ಟೋಲ್ ಹೆಜಮಾಡಿ ಜತೆ ವಿಲೀನ : ನಳಿನ್ ಕುಮಾರ್ ಕಟೀಲ್

ಮಂಗಳೂರು: ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕರ ತೀವ್ರ ವಿರೋಧಕ್ಕೆ ಕಾರಣವಾಗಿರುವ ಸುರತ್ಕಲ್ ಸಮೀಪದ ಎನ್ಐಟಿಕೆ ಟೋಲನ್ನು ಹೆಜಮಾಡಿ ಜತೆ ಮುಂದಿನ ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ.ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ)ಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.

ಎನ್ ಎಚ್ ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಕೇಂದ್ರ ಸಚಿವ ನಿತಿನ್ ಗಡ್ಕರಿಯೊಂದಿಗೆ ಈ ಬಗ್ಗೆ ಚರ್ಚೆ ಮಾಡಲಾಗಿದ್ದು ಟೋಲ್ ವಿಲೀನದ ಬಗ್ಗೆ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಒಂದು ತಿಂಗಳ ಅವಧಿಯೊಳಗೆ ಸುರತ್ಕಲ್ ಟೋಲ್ ಅನ್ನು ಬೇರೆ ಟೋಲ್ ನೊಂದಿಗೆ ವಿಲೀನಕ್ಕೆ ಸೂಚಿಸಲಾಗಿದೆ ಎಂದು ಅಧಿಕಾರಿ ಲಿಂಗೇಗೌಡ ಹೇಳಿದರು.ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ದಿಶಾ ಸಭೆಯ ನಾಮನಿರ್ದೇಶಿತ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

23/08/2022 04:51 pm

Cinque Terre

5.06 K

Cinque Terre

9

ಸಂಬಂಧಿತ ಸುದ್ದಿ