ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: 'ಸರ್ಕಾರವು ಬಡವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿದ್ದು ಅಭಿವೃದ್ಧಿ ಪರ್ವ ಆರಂಭವಾಗಿದೆ'

ಮುಲ್ಕಿ: ರಾಜ್ಯ ಸರ್ಕಾರವು ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದು ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಮುಲ್ಕಿ ತಾಲೂಕು ಆಡಳಿತ ಸೌಧ, ಪ್ರವಾಸಿ ಮಂದಿರ ಹಾಗೂ ಕ್ಷೇತ್ರ ವ್ಯಾಪ್ತಿಯ ವಿವಿಧ ಯೋಜನೆಗಳಿಗೆ ನಿನ್ನೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಮುಲ್ಕಿ ತಾಲೂಕು ಘೊಷಣೆಯಾಗಿ ಕೇವಲ ಒಂದೂವರೆ ವರ್ಷದಲ್ಲಿ ತಾಲೂಕು ಆಡಳಿತ ಸೌಧ ಶಂಕುಸ್ಥಾಪನೆ ನಡೆದಿದೆ. ಮುಂದಿನ ವರ್ಷ ಜ.26ರಂದು ಸೌಧ ಲೋಕಾರ್ಪಣೆಯಾಗಬೇಕು ಎಂದರು.

ಮುಲ್ಕಿ ಮೂಡಬಿದ್ರಿ ಕ್ಷೇತ್ರದ ವಿವಿಧ ವಸತಿ ಯೋಜನೆಗಾಗಿ ಹೆಚ್ಚುವರಿಯಾಗಿ 5 ಕೋಟಿ ರೂ. ನೀಡಲಾಗುವುದು. ಶ್ರೀ ಕ್ಷೇತ್ರ ಧರ್ಮಸ್ಥಳದ ಯಾತ್ರಿಕರ ಉಪಯೋಗಕ್ಕಾಗಿ ಸುಮಾರು 100 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಹಾಗೂ ಹೆಲಿಪ್ಯಾಡ್ ನಿರ್ಮಾಣ ಯೋಜನೆಯ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.

ರಾಜ್ಯ ಲೋಕೋಪಯೋಗಿ ಸಚಿವ ಸಿ.ಸಿ ಪಾಟಿಲ್ ಮಾತನಾಡಿ, ಮುಲ್ಕಿ ಮೂಡಬಿದ್ರಿ ಕ್ಷೇತ್ರದ ರಸ್ತೆಗಳು ಅಭಿವೃದ್ಧಿ ಹೊಂದುತ್ತಿದ್ದು ರಾಜ್ಯ ಮಟ್ಟದಲ್ಲಿ ಹೆದ್ದಾರಿ ಮರು ಡಾಂಬರೀಕರಣ ಹಾಗೂ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮುಲ್ಕಿ ಮೂಡಬಿದ್ರಿ ಕ್ಷೇತ್ರದ ವಿವಿಧ ಕಾಮಗಾರಿಗಾಗಿ 20 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಕಾಂಗ್ರೆಸ್ ಮುಖವಾಹಿನಿ ವ್ಯಕ್ತಿಗಳು 40% ಸರಕಾರ ಎಂದು ದೂರಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಮನೆಯಲ್ಲಿ ಮೀಟಿಂಗ್ ಮಾಡಿ ಹೊರಬಂದು ಅವರನ್ನೂ ಸೇರಿಸಿ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ. ಜನತೆ ಇಂತವರ ಮಾತನ್ನು ನಂಬಬಾರದು ಎಂದು ತಿಳಿಸಿದರು.

ಇಂಧನ ಸಚಿವ ಸುನಿಲ್ ಕುಮಾರ್ ಹಾಗೂ ಸಮಾರಂಭದ ಅಧ್ಯಕ್ಷತೆ ವಹಿಸಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿದರು. ಕಾರ್ಯಕ್ರಮಕ್ಕೂ ಮೊದಲು ಸಚಿವದ್ವಯರನ್ನು ತೆರೆದ ಜೀಪ್‌ನಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಯಿತು.

Edited By : Manjunath H D
Kshetra Samachara

Kshetra Samachara

28/08/2022 08:27 am

Cinque Terre

8.21 K

Cinque Terre

0

ಸಂಬಂಧಿತ ಸುದ್ದಿ