ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಫಾಝಿಲ್, ಮಸೂದ್ ಕೊಲೆ ಕೇಸನ್ನು ಎನ್‌ಐಎಗೆ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

ಮಂಗಳೂರು: ನಗರದ ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಎಸಗಿರುವ ತಾರತಮ್ಯವನ್ನು ಖಂಡಿಸಿ ಮತ್ತು ಸೂಕ್ತ ನ್ಯಾಯ ಕಲ್ಪಿಸುವಂತೆ ಆಗ್ರಹಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಬಳಿ ಸುರತ್ಕಲ್ ವಲಯ ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸುರತ್ಕಲ್ ವ್ಯಾಪ್ತಿಯ 27 ಜಮಾತ್‌ನ ಮುಸ್ಲಿಂ ಐಕ್ಯತಾ ವೇದಿಕೆ ಈ ಪ್ರತಿಭಟನೆಯ ನೇತೃತ್ವ ವಹಿಸಿತ್ತು. ಪ್ರತಿಭಟನಾ ವೇದಿಕೆಯಲ್ಲಿ ಎಸ್‌ಬಿ ದಾರಿಮಿ, ಮುಹಮ್ಮದ್ ಕುಂಞ, ಎಕೆ ಅಶ್ರಫ್, ಮೃತ ಫಾಝಿಲ್ ತಂದೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಫಾಝಿಲ್, ಮಸೂದ್ ಕೊಲೆ ಕೇಸನ್ನು ಎನ್ ಐಎಗೆ ಕೊಡಬೇಕು ಹಾಗೂ ಸರ್ಕಾರ ಪರಿಹಾರ ಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ 5 ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿತ್ತು.

Edited By :
PublicNext

PublicNext

16/09/2022 08:17 pm

Cinque Terre

30.41 K

Cinque Terre

0

ಸಂಬಂಧಿತ ಸುದ್ದಿ