ಉಡುಪಿ: ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ ಸರಿಪಡಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿನೂತನ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಉಡುಪಿಯ ಕಲ್ಮಾಡಿ ಜಂಕ್ಷನ್‌ನಿಂದ ಕರಾವಳಿ ಬೈಪಾಸ್‌ವರೆಗೆ ಕಾಲ್ನಡಿಗೆ ಜಾಥಾ ನಡೆಸಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಜಾಥಾದಲ್ಲಿ ಪಾಲ್ಗೊಂಡ ಕಾರ್ಯಕರ್ತರು ಮತ್ತು ಮುಖಂಡರು ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಅಕ್ರೋಶ ಹೊರಹಾಕಿದರು.
ಕಾಂಗ್ರೆಸ್‌ನ ಯುವ ಮುಖಂಡ ಮಿಥುನ್ ರೈ ಪ್ರತಿಭಟನಾ ಸಭೆಯ ನೇತೃತ್ವ ವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿ, ಉಡುಪಿಯ ಬಹುತೇಕ ರಸ್ತೆಗಳು ಹದಗೆಟ್ಟಿವೆ. ಜನರು ಮತ್ತು ವಾಹನ ಸವಾರರು ಅತ್ತಿಂದಿತ್ತ ಸಂಚರಿಸಿವುದಕ್ಕೇ ಆಗದಷ್ಡು ಹಾಳಾಗಿವೆ.ರಾಜ್ಯ ಸರಕಾರ ಮತ್ತು ಸ್ಥಳೀಯಾಡಳಿತ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿವೆ. ಈ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಅಮೃತ್ ಶೆಣೈ, ವೆರೋನಿಕಾ ಕರ್ನೋಲಿಯೋ, ಪ್ರಶಾಂತ್ ಜತ್ತನ್ನ ಸೇರಿದಂತೆ ಉಡುಪಿ ಬ್ಲಾಕ್ ಕಾಂಗ್ರೆಸ್‌ನ ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
27/09/2022 08:30 pm