ಮೂಡುಬಿದಿರೆ: ನಗರೋತ್ಥಾನ ಯೋಜನೆಯಡಿ ಸರ್ಕಾರದಿಂದ 1 ಕೋಟಿ ರೂ. ಅನುದಾನ ಬಂದಿದ್ದು, ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮಿಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ ಸುರೇಶ್ ಕೋಟ್ಯಾನ್, ಮೂಡುಬಿದಿರೆ ಪುರಸಭೆ ಅಧಿವೇಶನದಲ್ಲಿ ಆರೋಪಿಸಿದ್ದಾರೆ.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ಆರೋಪಕ್ಕೆ ಸಾಕ್ಷಿ ಸಮೇತ ದಾಖಲೆ ನೀಡಿ ಆಗ ನಾವೂ ಬೆಂಬಲಿಸುತ್ತೇವೆ. ಸುಳ್ಳು ಆರೋಪ ಮಾಡಬೇಡಿ ದಾಖಲೆ ನೀಡುವಂತೆ ಪಟ್ಟು ಹಿಡಿದರು. ಈ ಬಗ್ಗೆ ತೀವ್ರ ವಾಗ್ವಾದ ನಡೆಯಿತು. ಬಳಿಕ ಉತ್ತರಿಸಿದ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್, ನಗರೋತ್ಥಾನ ಅನುದಾನದ ಕಾಮಗಾರಿಯು ಪುರಸಭೆ ವ್ಯಾಪ್ತಿಗೆ ಬರುವುದಿಲ್ಲ. ಅದು ಜಿಲ್ಲಾಧಿಕಾರಿಯವರ ಮೇಲುಸ್ತುವಾರಿಯಲ್ಲೇ ನಡೆಯುತ್ತಿದೆ. ಕಾಮಗಾರಿಯ ಬಗ್ಗೆ ಯಾರಿಗಾದರೂ ಸಂಶಯವಿದ್ದಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಬಹುದೆಂದು ವಾದ ವಿವಾದಕ್ಕೆ ತೆರೆ ಎಳೆದರು.
Kshetra Samachara
28/09/2022 11:15 am