ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸ್ವಾಭಿಮಾನಿ ಎಸ್‌ಸಿಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಎಸ್‌ಸಿಗೆ ಶೇ 17 ಮತ್ತು ಎಸ್‌ಟಿಗೆ ಶೇ 7ರಷ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಅಂಬೇಡ್ಕರ್ ಫೋಟೋ ಹೊರತೆಗಿಸಿ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರನ್ನು ಸೇವೆಯಿಂದ ವಜಾ ಮಾಡಿ ಬಂಧಿಸಬೇಕು. ಎಸ್‌ಸಿ ಎಸ್‌ಟಿ ರೈತರಿಗೆ ಭೂಮಿ ಹಕ್ಕನ್ನು ಒದಗಿಸಬೇಕು. ರಾಜ್ಯದಲ್ಲಿ 11 ಸಾವಿರಕ್ಕೂ ಅಧಿಕ ಗ್ರಾಮಗಳಲ್ಲಿ ಎಸ್‌ಸಿಎಸ್‌ಟಿಗಳಿಗೆ ಸ್ಮಶಾನ ಭೂಮಿ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖಂಡರು ಈ ಸಂದರ್ಭ ಆಗ್ರಹಿಸಿದರು.
ಮುಖಂಡ ಸುಂದರ್ ಮಾಸ್ತರ್ ಮಾತನಾಡಿ, ಇದು ಎರಡನೇ ಹಂತದ ಹೋರಾಟವಾಗಿದ್ದು, ಬೇಡಿಕೆ ಈಡೇರದಿದ್ದರೆ ಮುಂದೆ ಉಗ್ರ ರೀತಿಯಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.
Kshetra Samachara
12/07/2022 07:48 pm