ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಡ್ರಗ್ಸ್ ವಿರುದ್ಧ ಕಠಿಣ ಕ್ರಮಕ್ಕೆ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುವೆ - ಮಂಜುನಾಥ ಭಂಡಾರಿ

ಮಂಗಳೂರು: ಡ್ರಗ್ಸ್ ದಂಧೆಗೆ ಕಠಿಣ ಕಾನೂನು ಕ್ರಮ ಜಾರಿಗೊಳಿಸಲು ಈ ಬಾರಿಯ ವಿಧಾನಪರಿಷತ್ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ತೊಡಗಿದವರನ್ನು ಬಂಧಿಸಿದ್ದರೂ ಅವರು ಜಾಮೀನು ಪಡೆದು ಹೊರಗೆ ಬಂದು ಮತ್ತೆ ಅದೇ ಕೆಲಸ ಮಾಡುತ್ತಾರೆ. ಡ್ರಗ್ಸ್ ದಂಧೆಗೆ ಬಹಳ ಸಣ್ಣ ಕೇಸ್‌ಗಳು ಇರುವುದರಿಂದ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಪೊಲೀಸರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕಠಿಣ ಕ್ರಮ ಜಾರಿಯಾಗಬೇಕಾದರೆ ಕಾನೂನಿನಲ್ಲಿ ತಿದ್ದುಪಡಿ ಮಾಡಿದ್ದಲ್ಲಿ ಮಾತ್ರ ಸಾಧ್ಯ ಎಂದು ಹೇಳಿದರು.

ಅವಿಭಜಿತ ದ.ಕ.ಜಿಲ್ಲೆಯಲ್ಲಿನ ಡ್ರಗ್ಸ್ ದಂಧೆಗೆ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಗೃಹಮಂತ್ರಿ, ಐಜಿ, ಪೊಲೀಸ್ ಕಮಿಷನರ್‌ಗೆ ಪತ್ರ ಬರೆದಿದ್ದೆ. ಡ್ರಗ್ಸ್ ದಂಧೆಯ ಕರಾಳತೆ ಎಷ್ಟರಮಟ್ಟಿಗೆ ಹೋಗಿದೆ ಎಂದರೆ ಇಲ್ಲಿನ ಕಾಲೇಜುಗಳಲ್ಲಿ ಅಡ್ಮಿಷನ್ ಸಂಖ್ಯೆ ಕುಂಠಿತಗೊಳ್ಳುತ್ತಿದೆ. ಡ್ರಗ್ಸ್ ದಂಧೆಯನ್ನು‌ ಡಿಜಿಯವರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

Edited By : Ashok M
PublicNext

PublicNext

22/10/2024 01:29 pm

Cinque Terre

12.02 K

Cinque Terre

0

ಸಂಬಂಧಿತ ಸುದ್ದಿ