ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪರ್ಯಾಯಕ್ಕೆ ಸಜ್ಜುಗೊಂಡ ಎಲ್ಲ ಟ್ಯಾಬ್ಲೊಗಳನ್ನು ರದ್ದುಪಡಿಸಿ ಸಂಪ್ರದಾಯಕ್ಕೆ ಒತ್ತುಕೊಟ್ಟು ಪರ್ಯಾಯ ನಡೆಸುವುದಾಗಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಹಾಗೂ ಪರ್ಯಾಯೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Kshetra Samachara
17/01/2022 02:31 pm