ಮಂಗಳೂರು: ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ತರಗತಿಯಲ್ಲಿ ಹಿಜಾಬ್ ಗೆ ಅವಕಾಶ ನೀಡಡಬೇಕೆಂದು ವಿವಾದ ಸೃಷ್ಟಿರುವ ವಿದ್ಯಾರ್ಥಿನಿಯರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಾಲೇಜು ಪ್ರಾಂಶುಪಾಲೆ ಡಾ.ಅನಸೂಯ ರೈ ಈ ವಿದ್ಯಾರ್ಥಿನಿಯರಿಗೆ ಮೂರು ದಿನಗಳೊಳಗೆ ಉತ್ತರಿಸುವಂತೆ ಮೇ 4 ರಂದು ನೋಟಿಸ್ ಜಾರಿ ಮಾಡಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವಂತಿಲ್ಲ ಎಂಬ ಆದೇಶವಿರುತ್ತದೆ. ಈ ಬಗ್ಗೆ ವಿಶ್ವವಿದ್ಯಾಲಯದಿಂದ ಮಾರ್ಗಸೂಚಿ ಹಾಗೂ ಹೈಕೋರ್ಟ್ ನ ಆದೇಶವನ್ನು ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಕಾಲೇಜಿನಲ್ಲಿ ಸುಮಾರು 1,600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗದೆ ಕಾಲೇಜು ಆವರಣದಲ್ಲಿ ಆತಂಕ, ಶಾಂತಿಭಂಗ ಮತ್ತು ಅಶಿಸ್ತು ಸೃಷ್ಟಿ ಮಾಡುತ್ತಿರುವುದು ಕಂಡುಬಂದಿರುತ್ತದೆ.
ಅಲ್ಲದೆ ನೀವು ಬಾಹ್ಯಶಕ್ತಿಗಳೊಂದಿಗೆ ಸೇರಿ ಸುದ್ದಿಗೋಷ್ಠಿ ಕರೆಸಿ ಕಾಲೇಜು, ಪ್ರಾಂಶುಪಾಲರ ವಿರುದ್ಧ ಹೇಳಿಕೆ ನೀಡಿದ್ದಾರೆ. ಈ ಮೂಲಕ ಕಾಲೇಜಿನ ಘನತೆಗೆ ಧಕ್ಕೆ ಉಂಟು ಮಾಡಿರುವುದನ್ನು ಗಮನಿಸಲಾಗಿದೆ. ಈ ರೀತಿಯ ವರ್ತನೆಯ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಸಮಜಾಯಿಷಿಯನ್ನು ಈ ಪತ್ರ ತಲುಪಿದ ಮೂರು ದಿನಗಳೊಳಗೆ ಪ್ರಾಂಶುಪಾಲರಿಗೆ ನೀಡುವಂತೆ ಸೂಚಿಸಲಾಗಿದೆ ಎಂದು ನೋಟಿಸ್ ನೀಡಲಾಗಿದೆ.
PublicNext
06/06/2022 08:43 pm