ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸ್ಕಾರ್ಫ್ ವಿವಾದ: ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಯಥಾಸ್ಥಿತಿ ಮುಂದುವರಿಸಿ ಸರ್ಕಾರ ಆದೇಶ

ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಕಾಲೇಜಿನಲ್ಲಿ ಸಮವಸ್ತ್ರ / ವಸ್ತ್ರ ಸಂಹಿತೆಯನ್ನು ಮುಂದಿನ ಅದೇಶ ಬರುವ ತನಕ ಯಥಾಸ್ಥಿತಿ ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇಲ್ಲಿ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಮತ್ತು ಹಿಜಾಬ್ ಧರಿಸುವ ಬಗೆಗಿನ ವಿಷಯಕ್ಕೆ ಸಂಬಂಧಿಸಿದಂತೆ ಚಿಂತನ ಮಂಥನ ನಡೆಸಲು ಉನ್ನತಮಟ್ಟದ ಸಮಿತಿ ರಚಿಸಿ ಅಧ್ಯಯನ ನಡೆಸಿ ಸಲ್ಲಿಸಲಾಗುವ ಶಿಫಾರಸ್ಸುಗಳನ್ನು ಪರಿಶೀಲಿಸಿದ ನಂತರ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಪಕ್ರಿಯೆ ಆಗುವವರೆಗೂ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ನಿಗದಿಗೊಳಿಸಿರುವ ಸಮವಸ್ತ್ರ /ವಸ್ತ್ರ ಸಂಹಿತೆಯ ವಿಷಯದಲ್ಲಿ ಯಥಾಸ್ಥಿತಿಯನ್ನು ಮುಂದುವರೆಸಲು ಸರ್ಕಾರಿ ಆದೇಶ ಸಂಖ್ಯೆ : ಇಪಿ/14/ಎಸ್ ಹೆಚ್ ಹೆಚ್ / 2022 ರಂತೆ ದಿನಾಂಕ 25-01-2022 ರಂದು ಆದೇಶ ಹೊರಡಿಸಿದೆ.

ಸರ್ಕಾರಿ ಆದೇಶವನ್ನು ಪಾಲಿಸಿ ಯಾವುದೇ ಗೊಂದಲಗಳಿಗೆ ಅವಕಾಶವನ್ನು ನೀಡದೆ ಶೈಕ್ಷಣಿಕ ಹಿತದೃಷ್ಟಿಯಿಂದ ಎಲ್ಲರೂ ಸಮಾನತೆಯಿಂದ ತರಗತಿಗಳಿಗೆ ಹಾಜರಾಗುವಂತೆ ಶಾಸಕ ರಘುಪತಿ ಭಟ್ ಮನವಿ ಮಾಡಿದ್ದಾರೆ.

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಇಲ್ಲಿ 1985 ರಿಂದಲೂ ಸಮವಸ್ತ್ರ/ವಸ್ತ್ರ ಸಂಹಿತೆ ಪದ್ಧತಿ ಜಾರಿಯಲ್ಲಿತ್ತು. ಈ ಕಾಲೇಜಿಗೆ ದಾಖಲಾಗುವ ವಿದ್ಯಾರ್ಥಿನಿಯರು ಪ್ರವೇಶ ಪಡೆಯುವ ವೇಳೆಯಲ್ಲಿ ಕಾಲೇಜು ನಿಗಧಿ ಮಾಡಿದ ಸಮವಸ್ತ್ರ/ ವಸ್ತ್ರಸಂಹಿತೆ ಕುರಿತು ಮಾಹಿತಿ ಇದ್ದು ಅದನ್ನು ಒಪ್ಪಿಯೇ ಸ್ವ-ಇಚ್ಛೆಯಿಂದ ಕಾಲೇಜಿಗೆ ದಾಖಲಾತಿಯನ್ನು ಪಡೆದಿರುತ್ತಾರೆ. ಆದರೆ ಪ್ರಸ್ತುತ ಈ ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಬಗ್ಗೆ ಗೊಂದಲವನ್ನುಂಟು ಮಾಡಿರುವುದರಿಂದ ಈ ಬಗ್ಗೆ ಸರ್ಕಾರಕ್ಕೆ ಸೂಕ್ತ ಕ್ರಮಕ್ಕಾಗಿ ಮನವಿ ಮಾಡಲಾಗಿತ್ತು.

ಸರ್ಕಾರಿ ಆದೇಶಕ್ಕೆ ಸಂಬಂಧಿಸಿದಂತೆ ಇಂದು ದಿನಾಂಕ 25-01-2022ರಂದು ಶಾಸಕ ಕೆ ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಉಡುಪಿ ಇಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಪೋಷಕರನ್ನೊಳಗೊಂಡ ಶಿಕ್ಷಣ ಸೇವಾ ಸಮಿತಿಯ ಜಂಟಿ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದು ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ತರಗತಿಗೆ ಹಾಜರಾಗಬೇಕೆಂದು ನಿರ್ಣಯಿಸಲಾಯಿತು. ಇದಕ್ಕೆ ಮಕ್ಕಳ ಪೋಷಕರನ್ನು ಒಳಗೊಂಡ ಸಮಿತಿಯ ಸದಸ್ಯರು ಬೆಂಬಲವನ್ನು ಸೂಚಿಸಿದರು.

Edited By : Nagesh Gaonkar
PublicNext

PublicNext

25/01/2022 07:48 pm

Cinque Terre

52.08 K

Cinque Terre

15

ಸಂಬಂಧಿತ ಸುದ್ದಿ