ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ರಾಷ್ಟ್ರ ಧ್ವಜವನ್ನು ಉಚಿತವಾಗಿ ವಿತರಿಸಿ: ಕಾಂಗ್ರೆಸ್ ಸೇವಾದಳ ಜಿಲ್ಲಾ ಉಪಾಧ್ಯಕ್ಷ ಗೋಕುಲ್‌ದಾಸ್ ಆಗ್ರಹ

ಸುಳ್ಯ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 11 ರಿಂದ 17ರವರೆಗೆ ಪ್ರತಿ ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸಲು ಸರಕಾರ ಕರೆ ನೀಡಿದೆ. ಆದರೆ ಧ್ವಜದ ವಿತರಣೆಗೆ ಸಮರ್ಪಕವಾದ ವ್ಯವಸ್ಥೆ ಮಾಡಿಲ್ಲ. ರಾಷ್ಟ್ರ ಧ್ವಜ ಮಾರಾಟದ ವಸ್ತು ವಾಗಬಾರದು. ರಾಷ್ಟ್ರ ಧ್ವಜವನ್ನು ಸರಕಾರ ಉಚಿತವಾಗಿ ಸಾರ್ವಜನಿಕರಿಗೆ ವಿತರಣೆ ಮಾಡಬೇಕು ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾ ಉಪಾಧ್ಯಕ್ಷ ಕೆ.ಗೋಕುಲ್‌ದಾಸ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೇಂದ್ರ ಸರಕಾರ ಕರೆ ನೀಡಿದೆ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಬೇಕು ಎಂದ ಅವರು ಅದಕ್ಕಾಗಿ ಎಲ್ಲರಿಗೂ ಧ್ವಜ ಉಚಿತವಾಗಿ ನೀಡಬೇಕು. ಖಾದಿ ಬಟ್ಟೆಯನ್ನು ಬಳಸಿ ರಾಷ್ಟ್ರ ಧ್ವಜ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನು ಸುಳ್ಯ ನಗರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆಯ ಬಗ್ಗೆ ನಗರಾಡಳಿತ ಯಾವುದೇ ಮಾಹಿತಿ ನೀಡಿಲ್ಲ. ಅಮೃತ ಮಹೋತ್ಸವ ಆಚರಣೆಯ ಬಗ್ಗೆ ನಗರಾಡಳಿತ ನಿರ್ಲಕ್ಷ್ಯ ವಹಿಸಿದಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ, ತಾಲೂಕು ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಮಾಧ್ಯಮ ವಕ್ತಾರರಾದ ಭವಾನಿಶಂಕರ ಕಲ್ಮಡ್ಕ, ನಂದರಾಜ ಸಂಕೇಶ, ಪ್ರಮುಖರಾದ ಜಯಪ್ರಕಾಶ್ ನೆಕ್ರಪ್ಪಾಡಿ, ಅನಿಲ್ ಬಳ್ಳಡ್ಕ ಉಪಸ್ಥಿತರಿದ್ದರು.

Edited By : Somashekar
Kshetra Samachara

Kshetra Samachara

06/08/2022 06:31 pm

Cinque Terre

11.8 K

Cinque Terre

3

ಸಂಬಂಧಿತ ಸುದ್ದಿ