ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ವತಿಯಿಂದ ಬೃಹತ್ ತಿರಂಗಾ ಯಾತ್ರೆ

ಕಾರ್ಕಳ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ವತಿಯಿಂದ ಕಾರ್ಕಳದಲ್ಲಿ ನಡೆದ 75 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ತಿರಂಗ ಯಾತ್ರೆಯಲ್ಲಿ ಪ್ರದರ್ಶಿಸಲಾಯಿತು. ಕಾರ್ಕಳದ ಸ್ವರಾಜ ಮೈದಾನದಿಂದ ಗಾಂಧಿ ಮೈದಾನದವರೆಗೆ ತಿರಂಗಾ ಯಾತ್ರೆ ಸಾಗಿ ಬಂತು.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ ರಾಷ್ಟ್ರಧ್ವಜ ಇದ್ದರೆ ದೇಶ. ರಾಷ್ಟ್ರಧ್ವಜ ಇದ್ದರೆ ಧರ್ಮ. ರಾಷ್ಟ್ರಧ್ವಜ ಇದ್ದರೆ ಸಂಸ್ಕೃತಿ. ಆದ್ದರಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದವರನ್ನು ಯುವ ಪೀಳಿಗೆ ಸ್ಮರಿಸಬೇಕಿದೆ ಎಂದರು.

ಇಂಧನ ಸಚಿವ ಸುನಿಲ್ ಕುಮಾರ್ ಮಾತನಾಡಿ ಪ್ರತಿಯೊಬ್ಬರ ಮನೆಯಲ್ಲೂ ರಾಷ್ಟ್ರಧ್ವಜ ಹಾಕುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶೆಟ್ಟಿ ಎಂ ಕೆ ವಿಜಯ್ ಕುಮಾರ್, ಕುಯಿಲಾಡಿ ಸುರೇಶ್ ನಾಯಕ್, ಉದಯಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ರು.

Edited By : Somashekar
Kshetra Samachara

Kshetra Samachara

13/08/2022 06:50 pm

Cinque Terre

8.08 K

Cinque Terre

0

ಸಂಬಂಧಿತ ಸುದ್ದಿ