ಮಲ್ಪೆ: ನಗರದ ಕಿನ್ನಿಮೂಲ್ಕಿ ಎಂಬಲ್ಲಿ ಅನಧಿಕೃತ ಮೀನು ಮಾರುಕಟ್ಟೆ ಶೆಡ್ ತೆರವು ವೇಳೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಹಾಗೂ ಇತರರ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಯಶವಂತ್ ಎನ್ ಪ್ರಭು ಈ ಸಂಬಂಧ ದೂರು ನೀಡಿದ್ದಾರೆ. ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿದ್ದ ಶೆಡ್ ತೆರವುಗೊಳಿಸಲು ಸಿಬ್ಬಂದಿಯೊಂದಿಗೆ ಜೆಸಿಬಿ ಸಹಿತ ತೆರಳಿದ್ದ ವೇಳೆ ಕೃಷ್ಣಮೂರ್ತಿ ಆಚಾರ್ಯ ಹಾಗೂ ಆಟೋ ಚಾಲಕರು ಹಾಗೂ ಇತರರು ಶೆಡ್ ತೆರವುಗೊಳಿಸುವ ಸಂದರ್ಭದಲ್ಲಿ ಅಡ್ಡಿ ಪಡಿಸಿದ್ದು, ಪೊಲೀಸರ ಸಹಾಯದಿಂದ ನಾವು ತೆರವು ಕಾರ್ಯಚರಣೆ ಮುಗಿಸಿದೆವು. ಬಳಿಕ ಸರಕಾರಿ ವಾಹನದಲ್ಲಿ ವಾಪಾಸ್ ಆಗುತ್ತಿದ್ದಾಗ ಕೃಷ್ಣಮೂರ್ತಿ ಆಚಾರ್ಯ ಹಾಗೂ ಅವರ 15-20 ಜನ ಸೇರಿಕೊಂಡು ವಾಹನವನ್ನು ಸುತ್ತುವರಿದು ನಮ್ಮನ್ನು ಮುಂದಕ್ಕೆ ಹೋಗದಂತೆ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
Kshetra Samachara
29/08/2022 12:49 pm