ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೋದಿ ಕಾರ್ಯಕ್ರಮದ ಮೈದಾನದ ಬಳಿಯ ಟೆಂಟ್ ನಿವಾಸಿಗಳ ತೆರವು!

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರು ಭೇಟಿ ನೀಡಲಿದ್ದಾರೆ‌. ಅಂದು ಮೋದಿಯವರು ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಬೃಹತ್ ಸಾರ್ವಜನಿಕ ‌ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವ ತಯಾರಿಯ ವೇಳೆ ಅಲ್ಲಿ ವಾಸಿಸುತ್ತಿದ್ದ 30ಕ್ಕೂ ಅಧಿಕ ಟೆಂಟ್ ನಿವಾಸಿಗಳನ್ನು ತೆರವುಗೊಳಿಸಿರುವ ಆರೋಪ ಕೇಳಿ ಬಂದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭದ್ರತಾ ಕಾರಣಗಳಿಗಾಗಿ, ಪಾರ್ಕಿಂಗ್ ಮತ್ತು ಇತರ ಕಾರ್ಯಕ್ರಮ ಸಂಬಂಧಿತ ಅವಶ್ಯಕತೆಗಳಿಗಾಗಿ ಮೈದಾನದ ಬಳಿಯಿರುವ ಟೆಂಟ್ ನಿವಾಸಿಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.‌ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಸ್ಥಳವನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಆ ಕಾರಣಕ್ಕಾಗಿ ಟೆಂಟ್ ಹಾಕಿ ವಾಸಿಸುತ್ತಿದ್ದವರನ್ನು ಪೊಲೀಸರು ಸ್ಥಳಾಂತರಗೊಳ್ಳಲು ಕೇಳಿಕೊಂಡಿದ್ದಾರೆ.

ಈ ವೇಳೆ ಅಲ್ಲಿಯೇ ವಾಸವಾಗಿದ್ದ ಕೋಲೆ ಬಸವನನ್ನು ಆಡಿಸುವ ಕುಟುಂಬಗಳನ್ನು ತೆರವು ಮಾಡಲಿಸಲಾಗಿದೆ. ಇದೀಗ ಅವರಿಗೆ ಸ್ಥಳೀಯ ಕಾರ್ಪೊರೇಟರ್ ನೆರವಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ. ತಹಶೀಲ್ದಾರ್ ಮತ್ತು ಇತರ ಕಾರ್ಮಿಕ ಇಲಾಖೆ ಸಿಬ್ಬಂದಿಯು ಊಟ ಸೇರಿದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅವರನ್ನು ಭೇಟಿ ಮಾಡಲಿದ್ದಾರೆ. ಆ ಕುಟುಂಬಗಳೊಂದಿಗೆ ಚರ್ಚಿಸಿ ಬಳಿಕ ನೆಲೆಸಲು ಅವರು ಆಸಕ್ತಿ ತೋರಿದ್ದಲ್ಲಿ ಅವರಿಗೆ ಶಾಶ್ವತ ಪುನರ್ವಸತಿ ಯೋಜನೆಯನ್ನೂ ಸಿದ್ಧಪಡಿಸಲಾಗುವುದು ಎಂದು ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

29/08/2022 06:54 pm

Cinque Terre

28.5 K

Cinque Terre

40

ಸಂಬಂಧಿತ ಸುದ್ದಿ