ಉಡುಪಿ: ಎನ್ಐಎ ದಾಳಿ ಖಂಡಿಸಿ ನಗರದ ಹುತಾತ್ಮ ಸ್ಮಾರಕದ ಮುಂಭಾಗದಲ್ಲಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು. ರಾಜಕೀಯ ಬಲದ ದುರ್ಬಳಕೆ ಮಾಡಿಕೊಂಡು ಎನ್ ಐಎ ದಾಳಿ ನಡೆಸುತ್ತಿದೆ ಎಂದು ಆರೋಪಿಸಿರುವ ಎಸ್‌ಡಿಪಿಐ ಇದೊಂದು ಸರ್ಕಾರಿ ಪ್ರಾಯೋಜಿತ ದಾಳಿ ಎಂದು ಆರೋಪಿಸಿದೆ.
ಕಳೆದ ಎರಡು ದಿನಗಳಿಂದ ಮಂಗಳೂರಿನ ವಿವಿಧೆಡೆ ಎನ್ಐಎ ದಾಳಿ ಮಾಡಿದ ಕ್ರಮಕ್ಕೆ ಎಸ್‌ಡಿಪಿಐ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು ,ಇದು ಬಿಜೆಪಿ ಪ್ರಾಯೋಜಿತ ದಾಳಿಯಾಗಿದ್ದು ಇದಕ್ಕೆ ಯಾವುದೇ ಕಾರಣಕ್ಕೂ ಬಗ್ಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
Kshetra Samachara
09/09/2022 11:41 am