ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸರಕಾರದಿಂದ ಬಿಲ್ಲವ ನಿಗಮ, ಮಂಡಳಿ ಸ್ಥಾಪನೆ ಬೇಡಿಕೆ ನಿರ್ಲಕ್ಷ್ಯ; ಶ್ರೀ ನಾರಾಯಣ ಗುರು ಐಕ್ಯತಾ ವೇದಿಕೆ ಆಕ್ರೋಶ

ಮಂಗಳೂರು: ಬಿಲ್ಲವ ನಿಗಮ ಅಥವಾ ಮಂಡಳಿ ಸ್ಥಾಪನೆ ಮಾಡಬೇಕೆಂಬ ಬೇಡಿಕೆಗೆ ಅಸ್ತು ಎಂದಿರುವ ರಾಜ್ಯ ಸರಕಾರದಿಂದ ಆ ಬಳಿಕ ಯಾವುದೇ ಸ್ಪಂದನೆ ದೊರಕುತ್ತಿಲ್ಲ ಎಂದು ಶ್ರೀ ನಾರಾಯಣ ಗುರು ಐಕ್ಯತಾ ವೇದಿಕೆ ರಾಜ್ಯ ಸಮಿತಿಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಾತನಾಡಿದ ಅವರು, ವಿವಿಧ ಒಳಪಂಗಡಗಳಿರುವ ಬಿಲ್ಲವ ಸಮಾಜದಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಸಾಕಷ್ಟು ಮಂದಿಯಿದ್ದಾರೆ‌. ಆದ್ದರಿಂದ ಬಿಲ್ಲವ ಸಮಾಜದ ಶೈಕ್ಷಣಿಕ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮದ ಅಗತ್ಯವಿದೆ. ಅದಕ್ಕಾಗಿ ಸರಕಾರ 500 ಕೋಟಿ ರೂ. ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಬಿಲ್ಲವ ಸಮುದಾಯವನ್ನು 2ಎಯಿಂದ ಹಿಂದುಳಿದ ಪ್ರವರ್ಗ 1ಕ್ಕೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಸರಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ. ಬಿಲ್ಲವ ಸಮುದಾಯವನ್ನು ಸರಕಾರ ಕಡೆಗಣಿಸಿರುವುದು ಸಹಿಸಲಸಾಧ್ಯ. ಬಿಲ್ಲವ ಸಮಾಜಕ್ಕೆ ನಿಗಮ ಸ್ಥಾಪನೆಯಾಗಲೇಬೇಕು‌. ಅಲ್ಲದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ - ಚೆನ್ನಯರ ಹೆಸರಿಡಬೇಕು.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡಬೇಕು ಎಂಬ ಬೇಡಿಕೆಗಳಿಗೆ ಸರಕಾರದಿಂದ ಯಾವುದೇ ಮನ್ನಣೆ ದೊರಕಿಲ್ಲ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ. ಮುಂದಿನ ತಿಂಗಳು ಹೋರಾಟದ ರೂಪುರೇಷೆಗೆ ಸಭೆ ನಡೆಸಲಾಗುತ್ತದೆ ಎಂದು ಸತ್ಯಜಿತ್ ಸುರತ್ಕಲ್ ಹೇಳಿದರು.

Edited By : Somashekar
Kshetra Samachara

Kshetra Samachara

19/09/2022 12:55 pm

Cinque Terre

8.4 K

Cinque Terre

0

ಸಂಬಂಧಿತ ಸುದ್ದಿ