ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಹಿಜಾಬ್ ತೀರ್ಪಿಗೆ ಮುಸ್ಲಿಂ ಸಂಘಟನೆಗಳ ವಿರೋಧ: ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತ

ಭಟ್ಕಳ: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಇಂದು ಮುಸ್ಲಿಂ ಸಂಘಟನೆ ಬಂದ್ ಗೆ ಕರೆ ನೀಡಿದೆ.. ನಿನ್ನೆ ತೀರ್ಪು ಬಂದ ಬಳಿಕ ಮುಸ್ಲಿಂ ವರ್ತಕರು ಅಂಗಡಿ ಮುಂಗಟ್ಟುಗಳನ್ನ ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಹೈಕೋರ್ಟ್ ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೇ ಇಂದು ಕೂಡಾ ಸ್ವಯಂ ಪ್ರೇರಿತವಾಗಿ ಬಂದ್ ಮಾಡುವಂತೆ ತಂಜೀಮ್ ಸಂಘಟನೆ ಕರೆ ನೀಡಿದೆ. ಭಟ್ಕಳ ಪಟ್ಟಣದಲ್ಲಿ ಹೆಚ್ಚಿನ ಅಂಗಡಿಗಳು ಬಂದ್ ಅಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಮುಂಜಾಗ್ರತೆ ಕ್ರಮ ವಹಿಸಿದ್ದು, ಬಂದ್ ಕರೆ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಮಾರ್ಚ್ 20ರ ವರೆಗೆ ನಿಷೇಧಾಜ್ಞೆ ಜಾರಿಯಿದ್ದು, ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆಗೆ ಅವಕಾಶವಿಲ್ಲ. ಶಾಂತಿ ಸುವ್ಯವಸ್ಥೆಯನ್ನ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.

Edited By : Shivu K
Kshetra Samachara

Kshetra Samachara

16/03/2022 02:08 pm

Cinque Terre

11.93 K

Cinque Terre

8

ಸಂಬಂಧಿತ ಸುದ್ದಿ