ಕಾಪು : ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಮುಸ್ಲಿಂ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕಾಪುವಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಮತ್ತು ಎಸ್.ಡಿ.ಪಿ.ಐ ಸಂಘಟನೆಗಳ ಬೆಂಬಲದೊಂದಿಗೆ ನಡೆಯುತ್ತಿರುವ ಬಂದ್ ಗೆ ಬೆಂಬಲ ಸೂಚಿಸಿ ಮುಸ್ಲಿಂ ಸಮುಯದಾಯದವರು ಇಂದು ಬೆಳಗ್ಗಿನಿಂದಲೇ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾಪು ಪೇಟೆ, ಉಚ್ಚಿಲ, ಬೆಳಪು, ಮಲ್ಲಾರು ಸಹಿತ ವಿವಿಧೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ವ್ಯವಹಾರ ಸ್ಥಗಿತಗೊಳಿಸಲಾಗಿದೆ.
Kshetra Samachara
17/03/2022 01:12 pm