ಮಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಅಮಾಯಕ ಯುವಕರ ಮೇಲೆ ಪ್ರಕರಣ ದಾಖಲಿಸಿ ರಾತೋರಾತ್ರಿ ಮನೆಗೆ ನುಗ್ಗಿ ಅಸಭ್ಯ ವರ್ತನೆಯ ಮೂಲಕ 3 ಮಂದಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಬಿಜೆಪಿ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಪೊಲೀಸ್ ವರಿಷ್ಠಾಧಿಕಾರಿಗಳ ಕ್ರಮದ ಬಗ್ಗೆ ಉನ್ನತ ತನಿಖೆ ನಡೆಸಬೇಕು.
ಇಲ್ಲದಿದ್ದಲ್ಲಿ ಮೂರು ದಿನಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮಾರ್ಚ್ ನಡೆಸಿ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಸಿದ್ದಾರೆ.
ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಸತ್ಯಾಸತ್ಯತೆ ಜನರ ಮುಂದಿಡಬೇಕು. ಬಂಧಿಸಿದ ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
Kshetra Samachara
01/01/2021 08:39 pm