ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವಿಗೆ ಟೈಗರ್ ಕಾರ್ಯಾಚರಣೆಗೆ ಮೇಯರ್ ಸೂಚನೆ

ಮಂಗಳೂರು: ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಅನಧಿಕೃತ ಗೂಡಂಗಡಿಗಳನ್ನು ತೆರವಿಗೆ ಟೈಗರ್ ಕಾರ್ಯಾಚರಣೆ ನಡೆಸುವಂತೆ ಮಂಗಳೂರು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿಯವರು ಸೂಚನೆ ನೀಡಿದರು.

ಮಂಗಳೂರು ಮನಪಾ ಸಾಮಾನ್ಯ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಖ್ಯೆ ಹೆಚ್ಚುತ್ತಿದ್ದು, ಫುಟ್ ಪಾತ್ ನಲ್ಲಿ ಗೂಡಂಗಡಿಗಳು ಎದ್ದು ನಿಂತಿವೆ. ಈ ನಿಟ್ಟಿನಲ್ಲಿ ಪಾಲಿಕೆ ಸೂಕ್ತ ಕ್ರಮಕ್ಕೆ ಆಗ್ರಹಕ್ಕೆ ಪ್ರತಿಕ್ರಿಯಿಸಿ ಟೈಗರ್ ಕಾರ್ಯಾಚರಣೆ ಮೂಲಕ ಅನಧಿಕೃತ ಅಂಗಡಿಗಳ ತೆರವು ಮಾಡುವುದಾಗಿ ಹೇಳಿದರು.

ಗೇಲ್ ಕಂಪೆನಿ ಪೈಪ್ ಲೈನ್ ನಿಂದ ನೀರಿನ ಪೈಪ್ ಗಳಿಗೆ ಹಾನಿಯಾಗುತ್ತಿರುವ ಬಗ್ಗೆ ಮಾತನಾಡಲು ಹೋದ ಕಾರ್ಪೊರೇಟರ್ ಗಳ ಮೇಲೆಯೇ ಸಿಬ್ಬಂದಿ ಹಲ್ಲೆಗೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಪಾಲಿಕೆ ಸಭೆಯಲ್ಲಿ ಚರ್ಚೆಗೆ ಬಂದಿತ್ತು. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸುವಂತೆ ಪಾಲಿಕೆ ಇಂಜಿನಿಯರ್ ಗಳಿಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಸೂಚನೆ ನೀಡಿದರು.

Edited By : Nagesh Gaonkar
Kshetra Samachara

Kshetra Samachara

29/07/2021 10:31 pm

Cinque Terre

14.76 K

Cinque Terre

2

ಸಂಬಂಧಿತ ಸುದ್ದಿ