ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ವಿದ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ,ಅರೋಪಿಗಳನ್ನು ಮರು ಬಂಧಿಸಿ,ಕಠಿಣ ಕಾಯ್ದೆಯಡಿ ಕೇಸ್ ದಾಖಲಿಸಿ:ಎಮ್.ಎಲ್.ಸಿ ಹರೀಶ್ ಕುಮಾರ್ ಒತ್ತಾಯ

ಮಂಗಳೂರು: ಸುರತ್ಕಲ್ ನಲ್ಲಿ ಅನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ಕಠಿಣ ಕಾಯ್ದೆಯಡಿ ಕೇಸ್ ದಾಖಲಿಸಿ ಮರು ಬಂಧನ ಮಾಡದಿದ್ದರೆ ಕಾಂಗ್ರೆಸ್ ವತಿಯಿಂದ ಸೆಪ್ಟೆಂಬರ್ 30ರಂದು 3 ಗಂಟೆಗೆ ಸುರತ್ಕಲ್ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರತ್ಕಲಲ್ಲಿ ಪೊಲೀಸರ ಸಮ್ಮುಖದಲ್ಲೆ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಬಳಿಕ ಪೊಲೀಸರು ಅವರ ಮೇಲೆ ಸ್ವಯಂಪ್ರೇರಿತರಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಪ್ರಕರಣ ದಾಖಲಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗಟ್ಟುವ ಕೆಲಸ ಮಾಡಬೇಕಿತ್ತು. ಆದರೆ ಪೊಲೀಸರು ಆರೋಪಿಗಳನ್ನು ಬಂಧಿಸಿ ತಕ್ಷಣ ಬಿಡುಗಡೆ ಮಾಡಿರುವುದು ಸರಿಯಾದ ಕ್ರಮವಲ್ಲ. ಈ ಹಿಂದೆ ಈ ರೀತಿಯ ಕೃತ್ಯದಲ್ಲಿ ತೊಡಗಿದವರು ಕಠಿಣ ಕಾನೂನು ಕ್ರಮಕ್ಕೆ ಒಳಪಟ್ಟು ಜೈಲು ಸೇರಿದ ಉದಾಹರಣೆ ಇದೆ. ಆದರೆ ಪೊಲೀಸರ ಎದುರು ದಾಂಧಲೆ ನಡೆದಾಗಲೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳದೆ ಇರುವುದು ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

29/09/2021 07:23 pm

Cinque Terre

35.11 K

Cinque Terre

6

ಸಂಬಂಧಿತ ಸುದ್ದಿ