ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬೈಕ್‌ ನಲ್ಲಿ ಐವರ ಪ್ರಯಾಣ!; ವೀಡಿಯೊ ಹಂಚಿ, ಕ್ರಮಕ್ಕೆ ಶಾಸಕ ಸೂಚನೆ

ಮಂಗಳೂರು: ನಗರದ ಎಂ.ಜಿ.ರೋಡ್ ನಲ್ಲಿ ಒಂದೇ ಬೈಕ್‌ನಲ್ಲಿ ಮಕ್ಕಳು ಸೇರಿದಂತೆ ಐದು ಮಂದಿ ಪ್ರಯಾಣಿಸುತ್ತಿರುವ ವೀಡಿಯೊ ಒಂದನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮೂವರು ಮಕ್ಕಳು ಸೇರಿದಂತೆ ಐವರು ಒಂದೇ ಬೈಕ್ ನಲ್ಲಿ ಸಂಚರಿಸುತ್ತಿದ್ದು, ಇವರಲ್ಲಿ ಒಂದು ಮಗು ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿದೆ. ಮತ್ತೊಂದು ಮಗು ಮಲಗಿತ್ತು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ವೇದವ್ಯಾಸ ಕಾಮತ್, ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ಪೊಲೀಸರಿಗೆ ಸೂಚಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಡಿಸಿಪಿ ಅಪರಾಧ ಮತ್ತು ಸಂಚಾರ ಮಂಗಳೂರು ನಗರ ಪೊಲೀಸರು ಮಧ್ಯೆ ಪ್ರವೇಶಿಸಬೇಕು. ಇಂತಹ ಅಪಾಯಕಾರಿ ಸವಾರಿ‌ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೇದವ್ಯಾಸ ಕಾಮತ್ ಒತ್ತಾಯಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

06/05/2022 07:59 pm

Cinque Terre

6.95 K

Cinque Terre

0

ಸಂಬಂಧಿತ ಸುದ್ದಿ