ವಿಟ್ಲ: ವಿಟ್ಲದಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಇಸ್ಲಾಂ ಧರ್ಮದ ಅವಹೇಳನಕಾರಿಯಾಗಿ ನಿಂದಿಸಿದ್ದಾರೆ ಎಂದು ಆರೋಪಿ ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ವಿಟ್ಲದ ಸುನ್ನೀ ಕೋಆರ್ಡಿನೇಶನ್ ಸಮಿತಿ ವತಿಯಿಂದ ವಿಟ್ಲ ಎಸ್‌ಐ ಮಂಜುನಾಥ ಅವರಿಗೆ ದೂರು ಸಲ್ಲಿಸಿದೆ. ಸೋಮವಾರ ವಿಟ್ಲದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹಿಂದೂ ಜನಜಾಗೃತಿ ಸಮಾವೇಶದಲ್ಲಿ ರಾಧಾಕೃಷ್ಣ ಅಡ್ಯಂತಾಯ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಧರ್ಮವನ್ನು ನಿಂದಿಸಿದ್ದರು. ಅವರ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
PublicNext
08/06/2022 09:50 am