ಉಡುಪಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಉಡುಪಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿಪ್ರತಿಮೆ ಬಳಿ ಪ್ರತಿಭಟನೆ ಹಮ್ಮಿಕೊಂಡ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಇಡಿ, ಐಟಿ ಹಾಗೂ ಸಿಬಿಐಗಳ ಮೂಲಕ ವಿರೋಧ ಪಕ್ಷಗಳ ನಾಯಕರಿಗೆ ಕಿರುಕುಳ ನೀಡುವ ಮೂಲಕ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ.
ಈ ಪ್ರಕರಣದಲ್ಲಿ ಯಾವುದೇ ತಿರುಳಿಲ್ಲ ಎಂದು ನ್ಯಾಯಾಲಯವೇ ಹೇಳಿತ್ತು. ಇದೀಗ ಬಿಜೆಪಿ ನೇತೃತ್ವದ ಸರಕಾರ ಮತ್ತೆ ತನಿಖೆ ಹೆಸರಲ್ಲಿ ತಮ್ಮ ನಾಯಕಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.
Kshetra Samachara
27/07/2022 02:35 pm