ಉಡುಪಿ: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಪರ ವಿರೋಧ ಚರ್ಚೆಗೆ ನಾಂದಿ ಹಾಡಿದೆ. ಈ ಮಧ್ಯೆ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನಿನ್ನೆ ಭಾರೀ ಸಂಖ್ಯೆಯಲ್ಲಿ ಸೇರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದವು. ಇದೀಗ ಬಿಜೆಪಿ ಪ್ರಭಾವಿ ಮುಖಂಡ ಯಶ್ ಪಾಲ್ ಸುವರ್ಣ, ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರಸಭೆಗೆ ಮನವಿ ಸಲ್ಲಿಸಿದ್ದು ಮನವಿಗೆ ಪೂರಕ ಸ್ಪಂದನೆ ಸಿಕ್ಕಿದೆ.
PublicNext
18/08/2022 12:13 pm