ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸೆಪ್ಟೆಂಬರ್ 2ಕ್ಕೆ ಪ್ರಧಾನಿ ಮೋದಿ ಮಂಗಳೂರಿಗೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2ಕ್ಕೆ ಕಡಲ ನಗರಿ ಮಂಗಳೂರಿಗೆ ಆಗಮಿಸಲಿದ್ದಾರೆ.

ಅಂದು ಎಂಎನ್ಎಂಪಿಟಿಯಲ್ಲಿ ಸಾಗರಮಾಲಾ ಯೋಜನೆಗೆ ಚಾಲನೆ ನೀಡಲಿದ್ದಾರೆ‌. ಆ ಬಳಿಕ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ‌.

ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸು ತಂದಿದೆ. ಈಗಾಗಲೇ ದ.ಕ‌ ಜಿಲ್ಲೆಯ ಪ್ರತೀ ತಾಲೂಕಿನಿಂದ 25 ಸಾವಿರ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬಿಜೆಪಿ ಸೂಚನೆ ನೀಡಿದೆ. ಪ್ರವೀಣ್ ನೆಟ್ಟಾರು ಹತ್ಯೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಕಾರ್ಯಕರ್ತರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಅದರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಸಿಎಂ ಬೊಮ್ಮಾಯಿ ಬಂದಾಗಲೂ ಕಾರ್ಯಕರ್ತರು ಅವರ ವಿರುದ್ಧವೇ ಘೋಷಣೆ ಕೂಗಿದ್ದರು. ಆ ಬಳಿಕದ ಸಮೀಕ್ಷೆಯಲ್ಲೂ ಬಿಜೆಪಿಗೆ ಸೋಲುವ ಭೀತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ರಾಜ್ಯ ಬಿಜೆಪಿಗೆ ಬೂಸ್ಟ್ ನೀಡುವಂತಿದೆ. ಅವರ ಕಾರ್ಯಕ್ರಮ ವಿವರಗಳು ಇನ್ನಷ್ಟೇ ಬರಬೇಕಿದೆ.

Edited By : Nagaraj Tulugeri
PublicNext

PublicNext

22/08/2022 07:42 pm

Cinque Terre

25 K

Cinque Terre

11

ಸಂಬಂಧಿತ ಸುದ್ದಿ