ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೋದಿ ಸಮಾವೇಶದ ಮೈದಾನಕ್ಕೆ ಎರಡೇ ಕಡೆ ಸಿಸಿ ಕ್ಯಾಮೆರಾ ಅಳವಡಿಕೆ: ಎಡಿಜಿಪಿ ಗರಂ

ಮಂಗಳೂರು: ಪ್ರಧಾನಿ ಮೋದಿಯವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ‌‌. ಈ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮೈದಾನದಲ್ಲಿ ಎರಡೇ ಸಿಸಿ ಕ್ಯಾಮೆರಾ ಅಳವಡಿಸಿರೋದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಕಾರ್ಯಕ್ರಮ ನಿರ್ವಹಣೆ ಮಾಡುತ್ತಿರುವ ಕಂಪೆನಿ ಮೇಲೆ ಗರಂ ಆದರು.

ಸಮಾವೇಶ ನಡೆಯುವ ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮೆರಾ ಹಾಕಿರೋದನ್ನು ಕಂಡು ಗರಂ ಆದ ಅಲೋಕ್ ಕುಮಾರ್ ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಸಿಸಿಟಿವಿ ಕ್ಯಾಮೆರಾ ಹಾಕಬೇಕೆಂದು ಕಾರ್ಯಕ್ರಮ ನಿರ್ವಹಣೆ ಮಾಡಿದ ಕಂಪೆನಿಗೆ ತಾಕೀತು ಮಾಡಿದರು‌. ಈ ವೇಳೆ ಭದ್ರತೆಗೆ ನಿಯೋಜಿಸಿರುವ ಪೊಲೀಸರಿಗೂ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು.

ಪೊಲೀಸರು ಕಾರ್ಯಕ್ರಮದ ವೇಳೆ ತೀವ್ರ ನಿಗಾ ಇರಿಸಬೇಕು. ಎಲ್ಲಾ ಪೊಲೀಸರ ಕಣ್ಣು ಮೈದಾನದಲ್ಲಿ ಸೇರಿದ ಜನರ ಮೇಲಿರಬೇಕು. ಭಾಷಣ ಮಾಡುವ ಸಂದರ್ಭದಲ್ಲಿ ಪೊಲೀಸರು ಭಾಷಣ ನೋಡೋದು, ಮೊಬೈಲ್ ನಲ್ಲಿ ಫೋಟೋ ತೆಗೆಯೋದು ಮಾಡಬಾರದು. ಕಾರ್ಯಕ್ರಮದಲ್ಲಿ ಬಂದಿರುವವರೊಂದಿಗೆ ಕಿರಿಕ್ ಮಾಡಬಾರದು. ಗೊಂದಲ ಸೃಷ್ಟಿಯಾದಲ್ಲಿ ಪೊಲೀಸರು ಯಾರ ಮೇಲೂ ಕೈ ಮಾಡುವಂತಿಲ್ಲ. ಕೇವಲ ಅವರ ಕೈಯನ್ನು ಹಿಂದೆ ಕಟ್ಟಿ, ಬಾಯಿ ಮುಚ್ಚಿಸಿ ವ್ಯಾನ್ ಹತ್ತಿರ ಕರೆತರಬೇಕು. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ಬಿಗಿಯಾಗಿ ಮಾಡಬೇಕು. ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕೆಂದು ಪೊಲೀಸರಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ನೀಡಿದರು.

Edited By : Manjunath H D
PublicNext

PublicNext

01/09/2022 04:38 pm

Cinque Terre

34.05 K

Cinque Terre

7

ಸಂಬಂಧಿತ ಸುದ್ದಿ