ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕುದ್ರೋಳಿ ಕಸಾಯಿಖಾನೆಯನ್ನು ಕೇಂದ್ರಿಕರಿಸಿ ಅಕ್ರಮ ಗೋ ಸಾಗಾಟ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಆರೋಪ ಇದೆ. ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಕ್ರಮ ತೆಗೆದುಕೊಂಡಿಲ್ಲ ಎಂದು ವಿಎಚ್ ಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ವಿಭಾಗದ ಕಾರ್ಯದರ್ಶಿ ಶರಣ್ ಪಂಪ್ ವೆಲ್ , ಕುದ್ರೋಳಿ ಕಸಾಯಿಖಾನೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಇತರ ಕಡೆಗಳಲ್ಲಿರುವ ಅಕ್ರಮ ಕಸಾಯಿಖಾನೆಯಲ್ಲಿ ಗೋವಧೆ ನಡೆಯುತ್ತಿದೆ. ಆದರೆ ಜಿಲ್ಲಾಡಳಿತ ಈ ಬಗ್ಗೆ ಗಂಭೀರವಾಗಿ ಕ್ರಮ ತೆಗೆದುಕೊಳ್ಳದ ಕಾರಣ ಜಿಲ್ಲೆಯಲ್ಲಿ ನಿರಂತರವಾಗಿ ಗೋಹತ್ಯೆ, ಗೋಕಳ್ಳತನ, ಅಕ್ರಮ ಗೋ ಸಾಗಾಟ ನಡೆಯುತ್ತಿದೆ. ಇದು ವ್ಯವಸ್ಥಿತ ದಂಧೆಯಾಗಿದ್ದು ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಪೊಲೀಸ್ ಇಲಾಖೆ ಈ ದಂಧೆಯನ್ನು ಪತ್ತೆಹಚ್ಚಿ ಕಡಿವಾಣ ಹಾಕಬೇಕಿದೆ ಎಂದು ಆಗ್ರಹಿಸಿದರು.
Kshetra Samachara
06/10/2020 10:49 am