ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಕೊರೊನಾ ಪ್ರಕರಣವೂ ಹೆಚ್ಚುತ್ತಿದೆ; ಐವನ್ ವಾಗ್ದಾಳಿ

ಮಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದ್ದು, ಕೊರೊನಾ ಪ್ರಕರಣಗಳೂ ಹೆಚ್ಚುತ್ತಿವೆ. ವಿರೋಧ ಪಕ್ಷದವರಾಗಿ ಸೂಕ್ತ ವ್ಯವಸ್ಥೆ ಮಾಡುವಂತೆ ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೆವು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಅಧಿವೇಶನಗಳಲ್ಲಿಯೂ ಸಿದ್ದರಾಮಯ್ಯ, ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಬಗ್ಗೆ ವಿವರ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆ ಗಳಲ್ಲಿ ಬೆಡ್‌ಗಳು, ವೆಂಟಿಲೇಟರ್‌‌ಗಳು, ಸ್ಯಾನಿಟೈಸರ್‌‌, ಪಿಪಿಇ ಕಿಟ್‌ಗಳ ಕೊರತೆ ಇದೆ. ವೆಂಟಿಲೇಟರ್‌ ಒದಗಿಸುವಂತೆ ನಾವು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸುತ್ತೇವೆ.

ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ವಸತಿ ಯೋಜನೆ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಬಿಡಿಎ ಪ್ರಕರಣದಲ್ಲಿ 24 ಕೋಟಿ ರೂ. ಹಗರಣ ನಡೆದಿರುವ ಬಗ್ಗೆ ಸಾಕ್ಷ್ಯ ಸಹಿತ ದಾಖಲೆ ಇದೆ. ಆರ್‌ಟಿಜಿಎಸ್ ಮೂಲಕ ಬ್ಯಾಂಕ್ ಖಾತೆಗೆ 7.4 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

ವಿಜಯೇಂದ್ರ ಸೂಪರ್ ಸಿಎಂ ಆಗಿದ್ದು, ಅವರ ಅನುಮತಿ ಇಲ್ಲದೇ ಯಾವುದೇ ಕೆಲಸ ನಡೆಯುತ್ತಿಲ್ಲ. ಭ್ರಷ್ಟಾಚಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ವಿರುದ್ಧ ಸಂಪೂರ್ಣ ದಾಖಲೆ, ಪುರಾವೆಗಳಿವೆ. ಈಗ ಯಡಿಯೂರಪ್ಪ ವಿರುದ್ಧ ಬಿಜೆಪಿಯಿಂದ ಯಾವ ಕ್ರಮ ಕೈಗೊಳ್ಳಲಾಗುವುದು? ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸಿ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಪ್ರತಿಪಕ್ಷ ಒತ್ತಾಯಿಸಿದಾಗಲೆಲ್ಲ ನಾವು ತನಿಖೆಗೆ ಆದೇಶಿಸಿದ್ದೇವೆ ಎಂದರು.

Edited By : Nagesh Gaonkar
Kshetra Samachara

Kshetra Samachara

29/09/2020 04:49 pm

Cinque Terre

15.16 K

Cinque Terre

3

ಸಂಬಂಧಿತ ಸುದ್ದಿ