ಮಂಗಳೂರು: ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಇಲ್ಲ: ಶಾಸಕ ಕಾಮತ್ ಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಗೊಳಿಸುವ ಅಥವಾ ಗೋವಾದ ಕಚೇರಿ ಜೊತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ.

ಮಂಗಳೂರಿನ ಆದಾಯ ತೆರಿಗೆ ಕಚೇರಿಯಲ್ಲಿ ಆದಾಯ ತೆರಿಗೆ ಪ್ರಧಾನ ಆಯುಕ್ತರ ಹುದ್ದೆ ಇದೆ. ಅದೇ ರೀತಿ ಗೋವಾದಲ್ಲೂ ಪ್ರಧಾನ ಆಯುಕ್ತರ ಹುದ್ದೆ ಇದೆ. ಈ ಎರಡು ಕಚೇರಿಯ ಹುದ್ದೆ ಸೇರಿಸಿ ಒಂದೇ ಪ್ರಧಾನ ಆಯುಕ್ತರನ್ನು ನಿಯೋಜನೆ ಮಾಡಬೇಕು ಎಂಬ ಪ್ರಸ್ತಾಪ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪ್ರಧಾನ ಆಯುಕ್ತರ ಹುದ್ದೆ ಮಾತ್ರ ಗೋವಾಕ್ಕೆ ಸ್ಥಳಾಂತರ ಆಗುವ ಸಾಧ್ಯತೆ ಇದೆ. ಆದರೆ, ಇಡೀ ಕಚೇರಿ ಗೋವಾದ ಕಚೇರಿ ಜತೆಯಲ್ಲಿ ವಿಲೀನವಾಗುತ್ತಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಸ್ಪಷ್ಟಪಡಿಸಿದ್ದಾರೆ.

Kshetra Samachara

Kshetra Samachara

11 days ago

Cinque Terre

10.29 K

Cinque Terre

0