ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಆಯುಷ್ಮಾನ್ ಯೋಜನೆ ಅನುಷ್ಠಾನ ಸಂದರ್ಭದ ಗೊಂದಲ ನಿವಾರಿಸಿ"

ಮಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ಅನುಷ್ಠಾನ ಸಂದರ್ಭ ಉಂಟಾಗುತ್ತಿರುವ ಗೊಂದಲ ನಿವಾರಿಸಲು ಡಿ.ಸಿ. ಕಚೇರಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಹೆಲ್ಪ್ ಲೈನ್ ಆರಂಭಿಸುವಂತೆ ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯುಷ್ಮಾನ್ ಯೋಜನೆಯಲ್ಲಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸಾ ಸೌಲಭ್ಯಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದರು. ಅಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆಗೆ ಖಾಸಗಿ ಮೆಡಿಕಲ್ ಕಾಲೇಜು ಮಾತ್ರವಲ್ಲದೆ, 73 ಖಾಸಗಿ ಆಸ್ಪತ್ರೆಗಳಿಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ. ಅದರೆ, ಚಿಕಿತ್ಸೆ ಮತ್ತು ಬಿಲ್ ವಿಚಾರದಲ್ಲಿ ಗೊಂದಲ ಇನ್ನೂ ಮುಂದುವರಿದಿದೆ ಎಂದರು.

Edited By :
Kshetra Samachara

Kshetra Samachara

06/10/2020 06:26 pm

Cinque Terre

12.26 K

Cinque Terre

0

ಸಂಬಂಧಿತ ಸುದ್ದಿ