ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳ್ತಂಗಡಿ: ವೃಕ್ಷಯಜ್ಞ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ನರಸಿಂಹಘಡದ ತಪ್ಪಲಿನ ಕೂಡೆಲು ಪ್ರದೇಶದಲ್ಲಿ ಬದುಕು ಕಟ್ಟೋಣ ಬನ್ನಿ ತಂಡ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಹಾಗೂ ಬೆಳ್ತಂಗಡಿ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ಲಾಯಿಲ್ ಇವರ ಸಹಯೋಗದೊಂದಿಗೆ ಇಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು "ವೃಕ್ಷ ಯಜ್ಞ" ಹಣ್ಣಿನ ಗಿಡ ನೆಡುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ 400 ಕ್ಕೂ ಅಧಿಕ ಜನರಿಂದ ಕೂಡೆಲು ಪ್ರದೇಶದ ವಿವಿಧ ಭಾಗಗಳಲ್ಲಿ 1000 ಕ್ಕೂ ಮಿಕ್ಕಿ ಹಣ್ಣಿನ ಗಿಡ ನೆಡೆಯಲಾಯಿತು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ರೋಟರಿ ಕ್ಲಬ್ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬದುಕು ಕಟ್ಟೋಣ ಬನ್ನಿ ತಂಡ ಸಂಚಾಲಕರಾದ ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಬೆಳ್ತಂಗಡಿ ಅರಣ್ಯ ಇಲಾಖೆ ರೇಂಜರ್ ತ್ಯಾಗರಾಜ್‌, ತುಳುನಟ ಅರವಿಂದ ಬೋಳಾರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/08/2021 05:37 pm

Cinque Terre

7.48 K

Cinque Terre

0

ಸಂಬಂಧಿತ ಸುದ್ದಿ