ಸುಳ್ಯ:ಸುಳ್ಯ ಪರಿಸರದಲ್ಲಿ ಲಘು ಭೂ ಕಂಪನದ ಅನುಭವ ಉಂಟಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ತಜ್ಞರು ತಕ್ಷಣ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ತಜ್ಞರನ್ನು ಈಗಾಗಲೇ ಸಂಪರ್ಕಿಸಿ, ಭೂಮಿ ಕಂಪಿಸಿದ ಪ್ರದೇಶಕ್ಕೆ ಭೇಟಿ ನೀಡಲು ಸೂಚಿಸಲಾಗಿದೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಸಲಹೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಕೂಡಾ ಮುಂಜಾಗ್ರತಾ ಕ್ರಮ ವಹಿಸಲು ಸನ್ನದ್ಧವಾಗಿದೆ. ಜನತೆ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಸಾಮಾಜಿಕ ಜಾಲತಾಣದ ಮೂಲಕ ಹರಡುತ್ತಿರುವ ವದಂತಿಗಳಿಗೆ ಜನತೆ ಕಿವಿಗೊಡಬಾರದು ಎಂದರು.
Kshetra Samachara
28/06/2022 11:20 pm