ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಮಳೆಹಾನಿ ಪ್ರದೇಶಗಳಿಗೆ ಇಂಧನ ಸಚಿವ ಸುನಿಲ್ ಕುಮಾರ್ ಭೇಟಿ : ತುರ್ತು ದುರಸ್ತಿಗೆ ಸೂಚನೆ

ಕಾರ್ಕಳ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವೆಡೆ ಹಾನಿ ಸಂಭವಿಸಿದೆ.ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ ಸುನಿಲ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

ಹೆಬ್ರಿ ತಾಲೂಕಿನ ಅಂಡಾರು ಗ್ರಾಮದ ಪೈಥಾಳ ಎಂಬಲ್ಲಿನ ಸಂಪರ್ಕ ಸೇತುವೆ ಹಾನಿಯಾದ ಪ್ರದೇಶಕ್ಕೆ ತೆರಳಿ ಸಚಿವರು ಹಾನಿ ವೀಕ್ಷಿಸಿದರುಮ ಬಳಿಲ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜು ಬಳಿ ಭೂ ಕುಸಿತ ಆದ ಸ್ಥಳಗಳಿಗೆ ಇಂದು ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಭೇಟಿ ನೀಡಿದರು.

ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ತುರ್ತು ದುರಸ್ತಿ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು ಮಳೆ ಹಾನಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸರ್ವ ರೀತಿಯಲ್ಲೂ ಸನ್ನದ್ಧರಾಗಿರುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

Edited By : Nirmala Aralikatti
Kshetra Samachara

Kshetra Samachara

08/07/2022 01:04 pm

Cinque Terre

8.25 K

Cinque Terre

1

ಸಂಬಂಧಿತ ಸುದ್ದಿ