ಕಾಪು : ನಿರಂತರ ಸುರಿಯುತ್ತಿರುವ ಮಳೆಗೆ ಪಡುಬಿದ್ರೆ ಕಡಲ್ಕೊರೆತ ಪ್ರದೇಶಗಳಿಗೆ ಕಾಪು ಶಾಸಕ ಲಾಲಾಜಿ ಮೆಂಡನ್ ಭೇಟಿ ನೀಡಿ ತುರ್ತು ಕಾಮಗಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಬಂದರು ಹಾಗೂ ಮೀನುಗಾರಿಕಾ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರು ಪ್ರಕಾಶ್ ಶೆಟ್ಟಿ, ಪಡುಬಿದ್ರೆ ಗ್ರಾಮ ಪಂಚಾಯತ್ ಅಧ್ಯಕ್ಷರು ರವಿ ಶೆಟ್ಟಿ, ಉಪಾಧ್ಯಕ್ಷರು ಯಶೋಧ, ಗ್ರಾಮ ಪಂಚಾಯತ್ ಸದಸ್ಯರಾದ ವಿನಯ ಪುತ್ರನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
Kshetra Samachara
09/07/2022 06:32 pm