ಬೈಂದೂರು: ಕಳೆದ ಹಲವು ದಿನಗಳಿಂದ ಮಳೆರಾಯನ ಆರ್ಭಟಕ್ಕೆ ಸೌಪರ್ಣಿಕ ನದಿಯ ಉಕ್ಕಿ ಹರಿಯುತ್ತಿದ್ದು ಅಕ್ಕ ಪಕ್ಕದ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದೆ. ಸಾಲ್ಬುಡ-ನಾವುಂದ, ಪಡುಕೋಣೆ, ಕಿರಿಮಂಜೇಶ್ವರ , ಮರವಂತೆ, ಬಡಾಕೇರಿ, ನಾಡ ಪ್ರದೇಶಗಳಲ್ಲಿ ನೆರೆ ಹಾವಳಿಯಿಂದ ಜನಜೀವನ ದುಸ್ತರವಾಗಿದೆ..
ಇನ್ನು ಈ ಭಾಗದ ನೆರೆಹಾವಳಿ ಪ್ರದೇಶಗಳಿಗೆ ಮಾಜಿ ಶಾಸಕ ಕೆ.ಗೋಪಾಲ್ ಪೂಜಾರಿ ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದರು.
ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ ಕುಮಾರ್ ಕೊಡವೂರು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮದನ್ ಕುಮಾರ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ನರಸಿಂಹ ದೇವಾಡಿಗ, ಪ್ರಧಾನ ಕಾರ್ಯದರ್ಶಿಯಾದ ಜಗದೀಶ್ ದೇವಾಡಿಗ, ಬೈಂದೂರು ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಶೇಖರ್ ಪೂಜಾರಿ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಶ್ರೀ ರೋಶನ್ ಪೂಜಾರಿ, ನಾವುಂದ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರಮೋದ್ ಪೂಜಾರಿ, ಶ್ರೀ ರಾಮ ಪೂಜಾರಿ, ಶ್ರೀ ಗಣೇಶ್ ಪೂಜಾರಿ, ಕಂಬದ ಕೋಣೆ ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ಆಚಾರ್ ಹಾಗೂ ಕಾಂಗ್ರೆಸ್ ಮುಖಂಡರು, ಮಹಿಳಾ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.
Kshetra Samachara
09/07/2022 06:42 pm