ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ನೆರೆ ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ

ಸುಳ್ಯ: ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು, ಕೊಯನಾಡು ಮತ್ತಿತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.‌

ಕೊಯನಾಡು ಶಾಲೆ, ಕಿಂಡಿ ಅಣೆಕಟ್ಟು ಪ್ರದೇಶ, ಎರಡನೇ ಮೊಣ್ಣಂಗೇರಿ, ರಾಮಕೊಲ್ಲಿ, ಕರ್ತೋಜಿ ಗುಡ್ಡ ಕುಸಿತ ಪ್ರದೇಶ ಮತ್ತಿತರ ಕಡೆಗಳಿಗೆ ಭೇಟಿ ನೀಡಿ ಹಾನಿಯಾದ ಪ್ರದೇಶಗಳನ್ನು ವೀಕ್ಷಿಸಿದರು. ಕೆಲವು ಸಂತ್ರಸ್ತರು ತಮಗೆ ಸರ್ಕಾರ ನೀಡಿದ ಪರಿಹಾರ ಸಾಲದು ಎಂದು ಅಳಲು ತೋಡಿಕೊಂಡರು‌. ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಟಿ.ಎಂ.ಶಾಹೀದ್, ಎಸ್‌.ಸಂಶುದ್ದೀನ್, ಕೆ.ಎಂ.ಮುಸ್ತಫಾ, ಜಿ.ಕೆ.ಹಮೀದ್, ಅಬೂಸಾಲಿ, ರಹೀಂ‌ ಬೀಜದಕಟ್ಟೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

18/08/2022 10:34 pm

Cinque Terre

6.13 K

Cinque Terre

2

ಸಂಬಂಧಿತ ಸುದ್ದಿ