ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಆರ್ಥಿಕ ಸಹಾಯಧನ ನೀಡಿದ ಮುಖಂಡರು ಮಾಜಿ ಮುಖ್ಯಮಂತ್ರಿ ಡಿ.ವಿ. ಎಸ್ ಹಾಗೂ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಲಾ ಒಂದು ಲಕ್ಷ ನವೋದಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡು ಲಕ್ಷ ರೂ. ಧನಸಹಾಯ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಪುತ್ತೂರಿನ ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಕುಟುಂಬಕ್ಕೆ ಆರ್ಥಿಕ ಧನಸಹಾಯ ನೀಡಿದ್ದಾರೆ.
ಡಿ.ವಿ ಸದಾನಂದ ಗೌಡರು ವೈಯಕ್ತಿಕವಾಗಿ ಒಂದು ಲಕ್ಷ ರೂ. ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಒಂದು ಲಕ್ಷ ರೂ ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಎರಡು ಲಕ್ಷ ರೂ. ಸಹಾಯಧನವನ್ನು ಕುಟುಂಬಸ್ಥರಿಗೆ ನೀಡಿದರು.
PublicNext
30/07/2022 05:51 pm