ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಬ್ರೇಕಿಂಗ್ ನ್ಯೂಸ್: ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ; ತಡೆದ ಪೊಲೀಸರು!

ಉಡುಪಿಯಲ್ಲಿ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದು ಬೆಳಿಗ್ಗೆ ಹಿಂದೂ ಪರ ಸಂಘಟನೆಗಳು ಬ್ರಹ್ಮಗಿರಿ ವೃತ್ತದಲ್ಲಿರುವ ಸಾವರ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬೆನ್ನಿಗೇ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪುಷ್ಪಾರ್ಚನೆ ಮಾಡಲು ಆಗಮಿಸಿದರು. ಈ ವೇಳೆ ಪಕ್ಕದಲ್ಲೇ ಇದ್ದ ಜಿಲ್ಲಾ ಕಾಂಗ್ರೆಸ್ ಭವನದತ್ತ ಬಂದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಭಾರೀ ಸಂಖ್ಯೆಯಲ್ಲಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದರು. ಬಳಿಕ ಘೋಷಣೆ ಕೂಗಿದ ಯುವ ಮೋರ್ಚಾ ಕಾರ್ಯಕರ್ತರು, ಕಾಂಗ್ರೆಸ್‌ಗೆ ಧಿಕ್ಕಾರ ಕೂಗಿದರು. ಕಾಂಗ್ರೆಸ್ ಪಕ್ಷ ಸಾವರ್ಕರ್ ಅವರನ್ನು ವಿರೋಧಿಸುತ್ತಿರುವುದು ಮತ್ತು ಟಿಪ್ಪುವನ್ನು ಬೆಂಬಲಿಸುವುದರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರ ಹಾಕಿದರು. ಬಳಿಕ ಪೊಲೀಸರು ಯುವ ಮೋರ್ಚಾ ಕಾರ್ಯಕರ್ತರನ್ನು ಕಾಂಗ್ರೆಸ್ ಭವನದಿಂದ ದೂರ ಕರೆದುಕೊಂಡು ಹೋದರು.

Edited By :
PublicNext

PublicNext

17/08/2022 12:37 pm

Cinque Terre

35.18 K

Cinque Terre

5

ಸಂಬಂಧಿತ ಸುದ್ದಿ