ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಶಿಕ್ಷಣ ವರ್ಗವು ಸೈದ್ಧಾಂತಿಕ ತೆಯನ್ನು ಬಲಿಷ್ಠ ಗೊಳಿಸುವುದು : ಕುಯಿಲಾಡಿ ಸುರೇಶ್ ನಾಯಕ್

ಕುಂದಾಪುರ: ಪಕ್ಷ, ಸಂಘಟನೆ ಹಾಗೂ ಶಿಸ್ತು ಪಾಲನೆಗೆ ಪ್ರಶಿಕ್ಷಣ ವರ್ಗವು ಪ್ರಮುಖ ಪಾತ್ರವಹಿಸುತ್ತದೆ. ಪಕ್ಷದ ಪ್ರಶಿಕ್ಷಣ ವರ್ಗವು ಸೈದ್ಧಾಂತಿಕ ವಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾದ ವತಿಯಿಂದ ಇಲ್ಲಿನ ಕೆಜಿಎನ್ ಫಾರ್ಮ್ ಹೌಸ್ನಲ್ಲಿ ಆಯೋಜಿಸಿದ ಜಿಲ್ಲಾ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಪಕ್ಷದ ತತ್ವ, ಸಿದ್ಧಾಂತ, ಇತಿಹಾಸ, ಸಾಗಿ ಬಂದ ಹೋರಾಟದ ಬಗ್ಗೆ ತಿಳಿಸಿಕೊಡುವ ಕಾರ್ಯ ಪ್ರಶಿಕ್ಷಣ ವರ್ಗದಲ್ಲಿ ನಡೆಯುತ್ತದೆ. ಕಾರ್ಯಕರ್ತರು ಪಕ್ಷದ ಆಚಾರ-ವಿಚಾರಗಳನ್ನು ತಿಳಿದುಕೊಳ್ಳಲು, ಉನ್ನತ ತರಬೇತಿಯನ್ನು ಪಡೆದು, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಇದು ಸಹಕಾರಿ. ಆ ಮೂಲಕ ಪಕ್ಷದ ಬಲವರ್ಧನೆಗೆ ಎಲ್ಲರೂ ಶ್ರಮಿಸೋಣ ಎಂದರು. ಬಿಜೆಪಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ ಮಾತನಾಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಎಸ್ಸಿ ಮೋರ್ಚಾದ ಕಾರ್ಯದರ್ಶಿ ಮಹೇಂದ್ರ ಕೌತಾಳ್, ಜಿಲ್ಲಾ ಎಸ್ಸಿ ಮೋರ್ಚಾ ಉಸ್ತುವಾರಿ ನಳಿನಿ ಪ್ರದೀಪ್, ಮಹಿಳಾ ಮೋರ್ಚಾ ರಾಜ್ಯ ಪ್ರಮುಖರಾದ ಶಿಲ್ಪಾ ಜಿ. ಸುವರ್ಣ, ರೇಷ್ಮಾ ಉದಯ ಕುಮಾರ್ ಶೆಟ್ಟಿ, ಕುಂದಾಪುರ ಎಸ್ಸಿ ಮೋರ್ಚಾ ಮಹೇಶ್ ಕಾಳಾವರ, ಮತ್ತಿತರರು ಉಪಸ್ಥಿತರಿದ್ದರು. ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಪ್ರಾಸ್ತವಿಸಿ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಗೋಪಾಲ್ ಕಳಿಂಜಿ ಸ್ವಾಗತಿಸಿದರು.

Edited By : PublicNext Desk
Kshetra Samachara

Kshetra Samachara

24/09/2022 05:02 pm

Cinque Terre

3.82 K

Cinque Terre

0