ಉಡುಪಿ: ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಹಿಂದಿನ ಸರಕಾರಗಳು ತಂದ ನಿಯಮಗಳನ್ನೇ ಮುಂದುವರಿಸಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ತಂದಿರುವ ಈ ವ್ಯವಸ್ಥೆ ಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್, ನಮ್ಮ ಸರ್ಕಾರ ಯಾವುದೇ ಹೊಸ ನಿಯಮ ಮಾಡಿಲ್ಲ. ಈಗಿರುವ ವ್ಯವಸ್ಥೆಯ ಬಗ್ಗೆ ಮರು ಚಿಂತನೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆವಿದ್ಯುತ್ ದರ ಮರುಹೊಂದಾಣಿಕೆ ನಿಯಮದ ಕುರಿತು ಚಿಂತನೆ ನಡೆಸುತ್ತೇವೆ. ಶೀಘ್ರದಲ್ಲೇ ಸಿಎಂ ಜತೆ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಲಿದ್ದು, ಬೇಕಾದರೆ ನಿಯಮ ಹಿಂಪಡೆಯಲು ಹಿಂಜರಿಯುವುದಿಲ್ಲ.
ಸಿಎಂ ಹಾಗೂ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್‌ಗೆ ಇಲ್ಲ.ಭ್ರಷ್ಟಾಚಾರ ಕಾಂಗ್ರೆಸ್ ನ ಟ್ರೇಡ್ ಮಾರ್ಕ್ ಆಗಿದೆ. ಅವರ ನಾಯಕರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಇದ್ದಾರೆ. ಅವರು ತಮ್ಮ ಆದರ್ಶಗಳ ಸ್ಪಷ್ಟತೆಯೊಂದಿಗೆ ಭಾರತ್ ಜೋಡೋ ಮೆರವಣಿಗೆಯನ್ನು ಮಾಡುತ್ತಿದ್ದಾರೆ. ಮೊದಲು ತಮ್ಮ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ ಒಳಿತು ಎಂದು ಹೇಳಿದರು.
Kshetra Samachara
03/10/2022 10:01 pm