ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕ ರಸ್ತೆಗೆ ಖಾಸಗಿ ತಡೆ - ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ತೆರವು

ಉಡುಪಿ:ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಖ್ಯರಸ್ತೆ ಬಳಿಯ ರಾಧಾಕೃಷ್ಣ ಅವರ ಅಂಗಡಿಯಿಂದ ಅಣ್ಣಪ್ಪ ಹೆಗ್ಡೆಯವರ ಮನೆಗೆ ಹೋಗುವ ಸಾರ್ವಜನಿಕ ರಸ್ತೆಯಲ್ಲಿ ಖಾಸಗಿ ಜಾಗದ ಮಾಲಕರು ರಸ್ತೆಗೆ ಅಡ್ಡಲಾಗಿ ತಡೆಯೊಡ್ಡಿರುತ್ತಾರೆ. ಸುಮಾರು 15 ಮನೆಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಸುಮಾರು 20 ವರ್ಷಗಳಿಂದ ಈ ಸಮಸ್ಯೆ ಇರುತ್ತದೆ. ಸ್ಥಳೀಯರ ಬೇಡಿಕೆಯಂತೆ ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ರಸ್ತೆ ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಹಾವಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಜಿತ್, ಸದಸ್ಯರಾದ ಉದಯ್ ಕೋಟ್ಯಾನ್, ಗುರುರಾಜ್, ಆಶಾ ಡಿ. ಪೂಜಾರಿ, ಪೊಲೀಸ್ ಉಪ ನಿರೀಕ್ಷಕರಾದ ಗುರುನಾಥ್ ಹಾದಿಮನಿ, ಹಾವಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/08/2021 03:51 pm

Cinque Terre

7.93 K

Cinque Terre

0

ಸಂಬಂಧಿತ ಸುದ್ದಿ