ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಕಾಂಗ್ರೆಸ್ ನಡಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ 'ನಮ್ಮ ನಡೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದೆಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ ಗುರು ಸಂದೇಶ ಯಾತ್ರೆಗೆ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಚಾಲನೆ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ಜಯಂತಿ ಆಚರಣೆಯ ನಿಮಿತ್ತ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದವರೆಗಿನ ಸಂದೇಶ ಯಾತ್ರೆಯಲ್ಲಿ ನಾರಾಯಣ ಗುರುಗಳ ಭಾವಚಿತ್ರದ ರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ದೊರೆಯಿತು.

ಈ ಸಂದರ್ಭ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ರಮಾನಾಥ ರೈ ಮಾತನಾಡಿದರು. ಯಾತ್ರೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೋ, ಮೊಯ್ದೀನ್ ಬಾವಾ, ಮುಖಂಡರಾದ ಪಿ.ವಿ. ಮೋಹನ್, ಪ್ರಕಾಶ್ ಸಾಲ್ಯಾನ್, ಸಲೀಂ, ಶಾಲೆಟ್ ಪಿಂಟೋ, ಶಾಹುಲ್ ಹಮೀದ್, ಅಬ್ಬಾಸ್ ಅಲಿ, ಶಶಿಧರ ಹೆಗ್ಡೆ, ಭಾಸ್ಕರ ಕೆ., ಹರಿನಾಥ್, ಅಬ್ದುಲ್ ರವೂಫ್, ಕೇಶವ ಮರೋಳಿ, ಅಬ್ದುಲ್ ಲತೀಫ್, ಸದಾಶಿವ ಉಳ್ಳಾಲ್, ಝೀನತ್ ಸಂಶುದ್ದೀನ್, ಮುಹಮ್ಮದ್ ಮೋನು, ಲುಕ್ಮಾನ್ ಬಂಟ್ವಾಳ, ಸುರೇಶ್ ಬಳ್ಳಾಲ್, ಟಿ.ಕೆ. ಸುಧೀರ್, ರಮಾನಂದ ಪೂಜಾರಿ, ಸುನಿಲ್ ಪೂಜಾರಿ, ರಾಕೇಶ್ ದೇವಾಡಿಗ, ಚಂದ್ರಕಲಾ, ಶಾಂತಲ ಗಟ್ಟಿ, ದಿನೇಶ್ ಕುಂಪಲ, ಮುಹಮ್ಮದ್ ಕುಂಜತ್ತಬೈಲ್, ದೀಪಕ್ ಪಿಲಾರ್, ಅಪ್ಪಿ, ಭರತೇಶ್ ಅಮೀನ್, ಹೇಮಂತ್ ಗರೋಡಿ ಮೊದಲಾದವರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

10/09/2022 01:17 pm

Cinque Terre

5.8 K

Cinque Terre

5

ಸಂಬಂಧಿತ ಸುದ್ದಿ